ADVERTISEMENT

ಕುಡುತಿನಿ: ದೂಳು, ಕಪ್ಪು ಹೊಗೆ ನಿಯಂತ್ರಿಸದ ಕಾರ್ಖಾನೆಗಳ ವಿರುದ್ಧ ಮುಷ್ಕರ

​ಪ್ರಜಾವಾಣಿ ವಾರ್ತೆ
Published 2 ಜನವರಿ 2021, 6:44 IST
Last Updated 2 ಜನವರಿ 2021, 6:44 IST
ಪ್ರತಿಭಟನಾ ಮೆರವಣಿಗೆ
ಪ್ರತಿಭಟನಾ ಮೆರವಣಿಗೆ   

ತೋರಣಗಲ್ಲು(ಬಳ್ಳಾರಿ ಜಿಲ್ಲೆ): ಇಲ್ಲಿಗೆ ಸಮೀಪದ ಕುಡುತಿನಿ ಪಟ್ಟಣದ ಸುತ್ತಲಿನ ಕೈಗಾರಿಕೆಗಳಿಂದ ಬರುವ ದೂಳು ಮತ್ತು ಕಪ್ಪು ಹೊಗೆಯನ್ನು ನಿಯಂತ್ರಿಸಬೇಕೆಂದು ಆಗ್ರಹಿಸಿ ಪಟ್ಟಣ ಪಂಚಾಯ್ತಿ ಅಧ್ಯಕ್ಷರು, ಸದಸ್ಯರು, ನಾಗರಿಕರು, ರೈತರು ಮತ್ತು ಪಟ್ಟಣದ ವಿವಿಧ ಸಂಘಟನೆಗಳ ಮುಖಂಡರು ಶನಿವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಡಿಸೆಂಬರಿನಲ್ಲಿ ಈ ಕುರಿತು ಗಮನ ಸೆಳೆದು ಕೈಗಾರಿಕೆಗಳ ವಿರುದ್ಧ ಪ್ರತಿಭಟನೆ ನಡೆಸಲಾಗಿತ್ತು. ಅಧಿಕಾರಿಗಳ ಭರವಸೆಯ ಹಿನ್ನೆಲೆಯಲ್ಲಿ ವಾಪಸ್ ಪಡೆಯಲಾಗಿತ್ತು. ಅಧಿಕಾರಿಗಳಿಗೆ ಸಾರ್ವಜನಿಕರು ಒಂದು ತಿಂಗಳ ಕಾಲ ಗಡುವು ನೀಡಿದ್ದರು. ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಶನಿವಾರ ಪಾದಯಾತ್ರೆ ಮತ್ತು ಅನಿರ್ದಿಷ್ಟ ಅವಧಿಯ ಮುಷ್ಕರವನ್ನು ಹಮ್ಮಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT