ADVERTISEMENT

ಸಂಡೂರು ಅಭಿವೃದ್ಧಿಗೆ ₹1,200 ಕೋಟಿ ಅನುದಾನ: ಎಚ್.ಎಸ್.ಮಂಜುನಾಥ ಗೌಡ

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2025, 7:37 IST
Last Updated 12 ಅಕ್ಟೋಬರ್ 2025, 7:37 IST
ಸಂಡೂರಿನಲ್ಲಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್‍ ವತಿಯಿಂದ ನಡೆದ ಕಾಂಗ್ರೆಸ್ ಯುವ ಸಮ್ಮೇಳನಕ್ಕೆ ಗಣ್ಯರು ಚಾಲನೆ ನೀಡಿದರು
ಸಂಡೂರಿನಲ್ಲಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್‍ ವತಿಯಿಂದ ನಡೆದ ಕಾಂಗ್ರೆಸ್ ಯುವ ಸಮ್ಮೇಳನಕ್ಕೆ ಗಣ್ಯರು ಚಾಲನೆ ನೀಡಿದರು   

ಸಂಡೂರು: ‘ರಾಜ್ಯಕ್ಕೆ ತೆರಿಗೆ ಪಾಲು, ಅನುದಾನ ಹಂಚಿಕೆಯಲ್ಲಿ ಕೇಂದ್ರ ಸರ್ಕಾರವು ಅನ್ಯಾಯ ಮಾಡುತ್ತಿದ್ದು, ಕೇಂದ್ರದ ಜನ ವಿರೋಧಿ ನೀತಿಗಳ ವಿರುದ್ಧ ಬೃಹತ್ ಅಭಿಯಾನ ರೂಪಿಸಬೇಕು’ ಎಂದು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ಮಂಜುನಾಥ ಗೌಡ ಹೇಳಿದರು.

ಪಟ್ಟಣದ ಪುರಸಭೆಯ ಬಸ್ ನಿಲ್ದಾಣದ ಬಳಿ ಶುಕ್ರವಾರ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್‍ ವತಿಯಿಂದ ಹಮ್ಮಿಕೊಂಡಿದ್ದ ಕಾಂಗ್ರೆಸ್ ಯುವ ಸಮ್ಮೇಳನಕ್ಕೆ ಚಾಲನೆ ನೀಡಿ ಮಾತನಾಡಿದರು.

‘ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ರಾಜ್ಯದಲ್ಲಿ ಯಶಸ್ಸು ಗಳಿಸಿದ್ದು, ಬಡ ಜನರ ಆರ್ಥಿಕ ಅಭಿವೃದ್ಧಿಗೆ ಸಹಕಾರಿಯಾಗಿದೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದಂತೆ ಸಂಡೂರು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ₹1,200 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಸಂಡೂರಿನ ಅಭಿವೃದ್ಧಿಗೆ ರಾಜ್ಯದ ಕಾಂಗ್ರೆಸ್ ಸರ್ಕಾರ ಬದ್ದವಾಗಿದೆ’ ಎಂದರು.

ADVERTISEMENT

ಶಾಸಕಿ ಅನ್ನಪೂರ್ಣ ತುಕಾರಾಂ ಮಾತನಾಡಿ, ‘ರಾಜ್ಯ ಸರ್ಕಾರವು ಬಡ ಜನರಿಗೆ ಪಡಿತರ ಅಕ್ಕಿ ಜೊತೆಗೆ ಇಂದಿರಾ ಆಹಾರ ಕಿಟ್ ವಿತರಿಸುವ ನಿರ್ಧಾರ ತೆಗೆದುಕೊಂಡಿದೆ. ದೇಶದಲ್ಲೆ ಮೊದಲ ಬಾರಿಗೆ ಎಲ್ಲ ಉದ್ಯೋಗಿ ಮಹಿಳೆಯರಿಗೆ ಋತುಚಕ್ರದ ರಜೆ ನೀಡುವ ನೀತಿ ಜಾರಿಗೆ ತಂದಿರುವುದು ಮಾತೃಹೃದಯಿ ಸರ್ಕಾರಕ್ಕೆ ಸಾಕ್ಷಿಯಾಗಿದೆ’ ಎಂದು ಹೇಳಿದರು.

ಇದೇ ವೇಳೆ ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ ಘಟನೆ ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್‍ವತಿಯಿಂದ ಪಟ್ಟದ ಪ್ರಮುಖ ರಸ್ತೆಗಳಲ್ಲಿ ಪಂಜಿನ ಮೆರವಣಿಗೆ ನಡೆಯಿತು.

ಯುವ ಕಾಂಗ್ರೆಸ್ ರಾಜ್ಯ ಉಸ್ತುವಾರಿಗಳಾದ ನಿಗಮ್ ಭಂಡಾರಿ, ಬಳ್ಳಾರಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಎನ್.ಕೆ.ಎಸ್.ಮಂಜುನಾಥ, ಸಾಮಾಜಿಕ ಜಾಲಾತಾಣದ ಅಧ್ಯಕ್ಷ ಸಿದ್ದುಹಳ್ಳಿಗೌಡ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಆಶಾಲತಾ, ಪುರಸಭೆ ಅಧ್ಯಕ್ಷ ಸಿರಾಜ್, ಯುವ ಕಾಂಗ್ರೆಸ್ ಕಾರ್ಯಕರ್ತರು, ಸಾರ್ವಜನಿಕರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.