ADVERTISEMENT

ಬಳ್ಳಾರಿ: ಕಾಂಗ್ರೆಸ್‌ನಿಂದ ಭರತ್, ಬಿಜೆಪಿಯಿಂದ ಶ್ರೀರಾಮುಲು ನಾಮಪತ್ರ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2023, 9:59 IST
Last Updated 18 ಏಪ್ರಿಲ್ 2023, 9:59 IST
ಸಚಿವ ಶ್ರೀರಾಮುಲು ಅವರು ಬೆಂಬಲಿಗರೊಂದಿಗೆ ಮೆರವಣಿಗೆ ನಡೆಸಿದರು.
ಸಚಿವ ಶ್ರೀರಾಮುಲು ಅವರು ಬೆಂಬಲಿಗರೊಂದಿಗೆ ಮೆರವಣಿಗೆ ನಡೆಸಿದರು.    

ಬಳ್ಳಾರಿ: ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಭರತ್ ರೆಡ್ಡಿ, ಬಳ್ಳಾರಿ ಗ್ರಾಮೀಣ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸಚಿವ ಬಿ.ಶ್ರೀರಾಮುಲು ಮಂಗಳವಾರ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಸುವ ಮೊದಲು ಶ್ರೀರಾಮುಲು ಕೋಟೆ ಮಲ್ಲೇಶ್ವರ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಬಳಿಕ ಸಾವಿರಾರು ಕಾರ್ಯಕರ್ತರು ಹಾಗೂ ಬೆಂಬಲಿಗರೊಂದಿಗೆ ಉಪ ವಿಭಾಗಾಧಿಕಾರಿಗಳ ಕಚೇರಿವರೆಗೂ ಮೆರವಣಿಗೆಯಲ್ಲಿ ತೆರಳಿ ಚುನಾವ ಣಾ ಅಧಿಕಾರಿ ಹೇಮಂತ ಕುಮಾರ್ ಅವರಿಗೆ ನಾಮಪತ್ರ ಸಲ್ಲಿಸಿದರು.

ಡೊಳ್ಳು ವಿವಿಧ ಕಲಾತಂಡಗಳು ಮೆರವಣಿಗೆಯಲ್ಲಿ ಭಾಗಿಯಾದವು. ಅವರು ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ ಆರನೇ ಬಾರಿಗೆ ವಿಧಾನಸೌಧ ಪ್ರವೇಶಿಸಲು ನಾಮಪತ್ರ ಸಲ್ಲಿಸುತ್ತಿದ್ದು ಅತ್ಯಧಿಕ ಬಹುಮತದಿಂದ ಗೆಲ್ಲುವ ವಿಶ್ವಾಸವಿದೆ ಎಂದರು.

ಬಳ್ಳಾರಿ ನಗರದಿಂದ ಭರತ್ ರೆಡ್ಡಿ
ನಾಮಪತ್ರ ಸಲ್ಲಿಸುವ ಮೊದಲು ಕನಕದರ್ಗಮ್ಮ ದೇವಿಗೆ ಪೂಜೆ ಸಲ್ಲಿಸಿ, ಅದ್ಧೂರಿ ಮೆರವಣಿಗೆಯಲ್ಲಿ ಪಾಲಿಕೆಕಚೇರಿಗೆ ತಲುಪಿದರು. ಬಳಿಕ ಚುನಾವಣಾಧಿಕಾರಿಯಾಗಿರುವ ಪಾಲಿಕೆ ಆಯುಕ್ತ ಎಸ್.ಎನ್. ರುದ್ರೇಶ್ ಅವರಿಗೆ ನಾಮಪತ್ರ ಸಲ್ಲಿಸಿದರು.

ಇದಕ್ಕೂ ಮುನ್ನ ಭರತ್ ರೆಡ್ಡಿಗೆ ಕಾಂಗ್ರೆಸ್ ಕಾರ್ಯಕರ್ತರು ಜೆಸಿಬಿಗಳ ಮೂಲಕ ಹೂವಿನ ಮಳೆ ಸುರಿಸುವ ಮೂಲಕ ಸಂಭ್ರಮಿಸಿದರು.
ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ,ಗ್ರಾಮೀಣ ಶಾಸಕ ನಾಗೇಂದ್ರ, ಪಾಲಿಕೆಯ ಸದಸ್ಯರು ಇದ್ದರು.

ರಾಮುಲು ನಾಮಪತ್ರ ಸಲ್ಲಿಸುವ ವೇಳೆ ಶಾಸಕ ಸೋಮಶೇಖರ್ ರೆಡ್ಡಿ, ಮಾಜಿ ಶಾಸಕ ಸುರೇಶ್ ಬಾಬು,ಮಾಜಿ ಸಂಸದೆ ಶಾಂತಾ ಹಾಗೂ ಮುಖಂಡರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT