ಬಳ್ಳಾರಿ: ‘ರಾಜ್ಯದ ಮುಖ್ಯಮಂತ್ರಿ ಯಾರು? ಸಿದ್ದರಾಮಯ್ಯ ಅಥವಾ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲ ಎಂಬ ಬಗ್ಗೆ ಗೊಂದಲ ಮೂಡಿದೆ’ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದರು.
‘ಸಿದ್ದರಾಮಯ್ಯ ಅವರು ಸುರ್ಜೆವಾಲ ಎದುರು ಮಂಡಿಯೂರಿದ್ದಾರೆ. ಸರ್ಕಾರದ ಆಯಸ್ಸನ್ನು ಅವರೇ ನಿರ್ಧರಿಸುವರು. ಬಿಹಾರ ಚುನಾವಣೆ ಕಾರಣಕ್ಕೆ ಸಿದ್ದರಾಮಯ್ಯ ಅವರನ್ನು ಹಿಂದುಳಿದ ವರ್ಗದ ನಾಯಕನಾಗಿ ಬಿಂಬಿಸಲಾಗುತ್ತಿದೆ.ಚುನಾವಣೆ ಬಳಿಕ ಈ ಸರ್ಕಾರವೇ ಇರುವುದಿಲ್ಲ’ ಎಂದು ಹೇಳಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ನನ್ನ ಮತ್ತು ಜನಾರ್ದನ ರೆಡ್ಡಿ ನಡುವೆ ಮನಸ್ತಾಪವಿಲ್ಲ. ಕೇಂದ್ರ ಸಚಿವ ಸೋಮಣ್ಣ ದೆಹಲಿಯಲ್ಲಿ ನಮ್ಮಿಬ್ಬರ ಸಂಧಾನ ಮಾಡುತ್ತಾರೆ ಎಂಬುದು ಸುಳ್ಳು. ನನ್ನನ್ನು ಪಕ್ಷದಲ್ಲಿ ಕಡೆಗಣಿಸಿಲ್ಲ. ನನ್ನನ್ನು ಬಿಟ್ಟು ರಾಜಕಾರಣ ಮಾಡಲು ಆಗದು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.