
ಬಳ್ಳಾರಿ: ‘ಪಕ್ಷದ ಹೈಕಮಾಂಡ್, ರಾಜ್ಯ ಹಾಗೂ ಜಿಲ್ಲಾ ನಾಯಕರ ಸರ್ವಾನುಮತದ ಅಭ್ಯರ್ಥಿ ಮೇಯರ್ ಆಗಿ ಆಯ್ಕೆಯಾಗಲಿದ್ದಾರೆ’ ಎಂದು ಬಳ್ಳಾರಿ ನಗರ ಕ್ಷೇತ್ರದ ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು.
ಶುಕ್ರವಾರ ನಗರದ 23ನೇ ವಾರ್ಡ್ ಪ್ರದಕ್ಷಿಣೆ ನಡೆಸಿ, ಕಿಚನ್ ಕಿಟ್‌ಗಳನ್ನು ಉಚಿತವಾಗಿ ವಿತರಿಸಿದ ಅವರು, ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು.
‘ಕಾಂಗ್ರೆಸ್ಸಿನಲ್ಲಿ ಗುಂಪುಗಾರಿಕೆಗೆ ಅವಕಾಶ ಇಲ್ಲ. ಹೈಕಮಾಂಡ್ ತೀರ್ಮಾನಿಸುವ ಅಭ್ಯರ್ಥಿ ಮೇಯರ್ ಆಗುತ್ತಾರೆ. ಅಲ್ಪಸಂಖ್ಯಾತ ಸಮುದಾಯದ ಸದಸ್ಯರು ಮೇಯರ್ ಸ್ಥಾನ ಕೇಳುವುದು ತಪ್ಪೇನಲ್ಲ. ಶಾಸಕರು, ಸಂಸದರು ಒಗ್ಗೂಡಿ ಅರ್ಹ ವ್ಯಕ್ತಿಯನ್ನು ಮೇಯರ್ ಆಗಿ ಆಯ್ಕೆ ಮಾಡುತ್ತೇವೆ, ಈ ವಿಚಾರದಲ್ಲಿ ನಮ್ಮ ಹಾಗೂ ನಾಯಕರ ನಡುವೆ ಭಿನ್ನಾಭಿಪ್ರಾಯ ಇಲ್ಲ’ ಎಂದರು.
ಸ್ಥಳೀಯರು ವಿವಿಧ ಸಮಸ್ಯೆಗಳ ಬಗ್ಗೆ ಶಾಸಕರಿಗೆ ಅಹವಾಲು ಸಲ್ಲಿಸಿದರು. ಸಮಸ್ಯೆ ಸರಿಪಡಿಸುವಂತೆ ಶಾಸಕರು ಅಧಿಕಾರಿಗಳಿಗೆ ಸೂಚಿಸಿದರು.
ಪಾಲಿಕೆಯ ಸದಸ್ಯ ಪಿ.ಗಾದೆಪ್ಪ, ಪ್ರಭಂಜನಕುಮಾರ್, ರಾಮಾಂಜನೇಯ, ನೂರ್ ಮೊಹಮ್ಮದ್, ಮಾಜಿ ಮೇಯರ್ ಎಂ.ರಾಜೇಶ್ವರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಭಿಲಾಶ್, ಸ್ಥಳೀಯ ಮುಖಂಡರಾದ ಸೋಮಣ್ಣ, ಗೌತಮ್, ವಿಜಯ್, ಮಹೇಂದ್ರ, ಶ್ರೀಕಾಂತ್, ಮಹಿಳಾ ಮುಖಂಡರಾದ ಪದ್ಮಾ, ಚಂಪಾ ಚವ್ಹಾಣ್, ಶ್ರೀಧರ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.