ತೆಕ್ಕಲಕೋಟೆ: ಇಲ್ಲಿನ ಕರೂರು ಗ್ರಾಮದ ಎ.ಪಿ.ಎಂ.ಸಿ. ಆವರಣದಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಮುಂಗಾರು ಹಂಗಾಮಿನ ಜೋಳ ಖರೀದಿ ಪ್ರಕ್ರಿಯೆಗೆ ವ್ಯವಸಾಯ ಸೇವಾ ಸಹಕಾರ ಸಂಘ ನಿಯಮಿತ ನಂ.2 ಅಧ್ಯಕ್ಷೆ ಎಂ.ಪದ್ಮಾವತಿ ಪೂಜೆ ಸಲ್ಲಿಸಿ ಚಾಲನೆ ನೀಡಿದರು.
'ಜೋಳ ಬೆಳೆದ ರೈತರಿಗೆ ಉತ್ತಮ ಬೆಂಬಲ ಬೆಲೆ ಕೊಡುವ ಉದ್ದೇಶದಿಂದ ಸರ್ಕಾರ ಬೆಂಬಲ ಬೆಲೆ ಯೋಜನೆಯಡಿ ಜೋಳ ಖರೀದಿಸಲು ಖರೀದಿ ಕೇಂದ್ರವನ್ನು ಪ್ರಾರಂಭ ಮಾಡಿದೆ. ಆದ್ದರಿಂದ ಈ ಭಾಗದ ಸುತ್ತಮುತ್ತಲಿನ ಜೋಳ ಬೆಳೆದ ರೈತರು ಖರೀದಿ ಕೇಂದ್ರದಲ್ಲಿ ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೆ ನೇರವಾಗಿ ಮಾರಾಟ ಮಾಡಬಹುದು' ಎಂದು ಹೇಳಿದರು.
ಸಹಕಾರ ಸಂಘದ ಉಪಾಧ್ಯಕ್ಷ ವೀರೇಶ, ನಿರ್ದೇಶಕರಾದ ಡಿ.ಚಂದ್ರಾರೆಡ್ಡಿ, ವಿ.ನಾರಾಯಣ, ಎಸ್.ನಾರಾಯಣರೆಡ್ಡಿ, ವೀರಭದ್ರಗೌಡ, ವ್ಯವಸ್ಥಾಪಕ ರಮೇಶ್ ರೆಡ್ಡಿ ಮತ್ತು ರೈತರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.