ADVERTISEMENT

ಹಂಪಿ: ಪ್ರವಾಸಿ ಚಟುವಟಿಕೆ ಬಂದ್

ಎಂಟು ಶಂಕಿತರಿಗೆ ಪ್ರತ್ಯೇಕ ವಾರ್ಡ್‌ಗಳಲ್ಲಿ ಚಿಕಿತ್ಸೆ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2020, 19:53 IST
Last Updated 14 ಮಾರ್ಚ್ 2020, 19:53 IST

ಬಳ್ಳಾರಿ: ’ಕೊರೊನಾ ಸೋಂಕು ನಿಯಂತ್ರಿಸಲು ಹಂಪಿಯಲ್ಲಿ ಮಾರ್ಚ್ 15ರಿಂದ ಒಂದು ವಾರ ಪ್ರವಾಸಿ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ. ಪ್ರವಾಸಿ ಸ್ಥಳಗಳಲ್ಲಿ ಟಿಕೆಟ್ ವಿತರಣೆ ಸಹ ಇರುವುದಿಲ್ಲ’ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್‌ ತಿಳಿಸಿದರು.

‘ವಿದೇಶಿಗರಿಂದಲೇ ಸೋಂಕು ಹಬ್ಬುವ ಸಾಧ್ಯತೆ ಹೆಚ್ಚಿರುವುದರಿಂದ ಹಂಪಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗುವುದು’ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಜಿಲ್ಲೆಗೆ ಬಂದಿರುವ ಫ್ರಾನ್ಸ್ ದೇಶದ 7 ಮಂದಿ, ಜರ್ಮನಿಯ 9 ಮಂದಿ ಯನ್ನು ಪ್ರತ್ಯೇಕ ವಾರ್ಡ್‌ನಲ್ಲಿರಿಸಲಾಗಿದೆ. ಅವರು ತಮ್ಮ ದೇಶಕ್ಕೆ ತೆರಳುವುದಾಗಿ ಮನವಿ ಮಾಡಿದ್ದರಿಂದ ಆರೋಗ್ಯ ಇಲಾಖೆ ಅಧಿಕಾರಿಗಳು ಅನುಮತಿ ನೀಡಿದ್ದಾರೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.