ADVERTISEMENT

‘ಮನೆ, ಮನೆ ಸರ್ವೇಯಿಂದ ಹೆಚ್ಚು ಪ್ರಕರಣ ಪತ್ತೆ’: ಎಸ್‌.ಎಸ್‌. ನಕುಲ್‌

​ಪ್ರಜಾವಾಣಿ ವಾರ್ತೆ
Published 27 ಜುಲೈ 2020, 16:22 IST
Last Updated 27 ಜುಲೈ 2020, 16:22 IST

ಹೊಸಪೇಟೆ: ‘ನಗರದಲ್ಲಿ ಮನೆ ಮನೆ ಸರ್ವೇ ನಡೆಸುತ್ತಿರುವುದರಿಂದ ಕೊರೊನಾ ಸೋಂಕಿತರ ಹೆಚ್ಚಿನ ಪ್ರಕರಣಗಳು ಪತ್ತೆಯಾಗುತ್ತಿವೆ’ ಎಂದು ಜಿಲ್ಲಾಧಿಕಾರಿ ಎಸ್‌.ಎಸ್‌. ನಕುಲ್‌ ತಿಳಿಸಿದ್ದಾರೆ.

‘ನಗರದಲ್ಲಿ ಇದುವರೆಗೆ 10,016 ಮನೆಗಳಿಗೆ ಭೇಟಿ ನೀಡಿ ಆರೋಗ್ಯ ಕಾರ್ಯಕರ್ತರು ಸರ್ವೇ ನಡೆಸಿದ್ದಾರೆ. ಅದೇ ರೀತಿ ಸಂಡೂರಿನಲ್ಲಿ 3,128 ಮನೆಗಳ ಸರ್ವೇ ಕೊನೆಗೊಂಡಿದೆ. ಉಸಿರಾಟದ ತೊಂದರೆ ಸೇರಿದಂತೆ ಇತರೆ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ರ್‍ಯಾಪಿಡ್‌ ಆ್ಯಂಟಿಜನ್‌ ಪರೀಕ್ಷೆ ನಡೆಸಿ, ಅಗತ್ಯ ಚಿಕಿತ್ಸೆ ನೀಡಲಾಗುವುದು. ಇದರಿಂದ ಸಾವಿನ ಸಂಖ್ಯೆ ತಗ್ಗಿಸಲು ಸಹಾಯವಾಗಲಿದೆ’ ಎಂದು ಸೋಮವಾರ ಹೇಳಿದ್ದಾರೆ.

‘ಮಂಗಳವಾರದಿಂದ (ಜು.28) ಬಳ್ಳಾರಿ ನಗರದಲ್ಲೂ ಮನೆ ಮನೆ ಸರ್ವೇ ಕಾರ್ಯ ಆರಂಭಿಸಲಾಗುವುದು. ಸೋಂಕಿತರನ್ನು ಆದಷ್ಟು ಶೀಘ್ರ ಪತ್ತೆ ಹಚ್ಚಿ, ಅವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುವುದು’ ಎಂದು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.