ADVERTISEMENT

ಬಳ್ಳಾರಿ: ಕೋವಿಡ್‌ಗೆ ಮೂರನೇ ಸಾವು

​ಪ್ರಜಾವಾಣಿ ವಾರ್ತೆ
Published 22 ಜೂನ್ 2020, 5:30 IST
Last Updated 22 ಜೂನ್ 2020, 5:30 IST
ಕೊರೊನಾ ವೈರಸ್ ಸೋಂಕು ಪರೀಕ್ಷೆ– ಸಂಗ್ರಹ ಚಿತ್ರ
ಕೊರೊನಾ ವೈರಸ್ ಸೋಂಕು ಪರೀಕ್ಷೆ– ಸಂಗ್ರಹ ಚಿತ್ರ   

ಬಳ್ಳಾರಿ: ಕೋವಿಡ್ ಸೋಂಕು ಮತ್ತು ಬಹು ಅಂಗಾಂಗ ವೈಫಲ್ಯದಿಂದ ಆದೋನಿ ಮೂಲದ ವ್ಯಕ್ತಿಯೊಬ್ಬರು ಸೋಮವಾರ ಬೆಳಗಿನ ಜಾವ ಮೃತಪಟ್ಟರು.

ವಿಮ್ಸ್‌ಗೆ ದಾಖಲಾಗಿದ್ದ ಅವರನ್ನು, ಸೋಂಕು ದೃಢಪಟ್ಟ ಬಳಿಕ ಜೂನ್ 17 ರಂದು‌ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.

ಅನಿಯಂತ್ರಿತ ಮಧುಮೇಹ, ಸೋಂಕು ತಗುಲಿದೆ ಎಂಬ ಆಘಾತ ಹಾಗೂ ಅಂಗಾಂಗ ವೈಫ್ಯಲ್ಯಕ್ಕೆ‌ ಒಳಗಾಗಿದ್ದ ಅವರಿಗೆ ವೆಂಟಿಲೇಟರ್ ಸೌಕರ್ಯದೊಂದಿಗೆ‌ ಚಿಕಿತ್ಸೆ ಮುಂದುವರಿಸಲಾಗಿತ್ತು‌. ಆದರೂ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.

ADVERTISEMENT

ರಾಜ್ಯದಲ್ಲಿ 9,150 ಸೋಂಕು ಪ್ರಕರಣಗಳು ದಾಖಲಾಗಿದ್ದು, ಇದುವರೆಗೂ 137 ಮಂದಿ ಮೃತಪಟ್ಟಿದ್ದಾರೆ. ಈವರೆಗೆ 5,618 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 3,391 ಸಕ್ರಿಯ ಪ್ರಕರಣಗಳು ರಾಜ್ಯದಲ್ಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.