ADVERTISEMENT

ಕೋವಿಡ್ ಬಗ್ಗೆ ಚಿಂತೆ‌ ಬೇಡ, ಊಟ-ವಸತಿ ವ್ಯವಸ್ಥೆ ಕಲ್ಪಿಸ್ತೇವೆ: ಅರ್ಜುನ್ ಮಲ್ಲೂರ್

ವಿವಿಧೆಡೆ‌ ನ್ಯಾಯಾಧೀಶರ ಭೇಟಿ, ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2020, 10:14 IST
Last Updated 11 ಏಪ್ರಿಲ್ 2020, 10:14 IST
ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ‌ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರ್ಜುನ್ ಎಸ್.ಮಲ್ಲೂರ್ ಅವರು ಅಧಿಕಾರಿಗಳಿಂದ ಮಾಹಿತಿ ಪಡೆದರು
ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ‌ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರ್ಜುನ್ ಎಸ್.ಮಲ್ಲೂರ್ ಅವರು ಅಧಿಕಾರಿಗಳಿಂದ ಮಾಹಿತಿ ಪಡೆದರು   

ಬಳ್ಳಾರಿ: ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ‌ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರ್ಜುನ್ ಎಸ್.ಮಲ್ಲೂರ್ ಅವರು ನಗರದ ವಿವಿಧೆಡೆ ಕಟ್ಟಡ ಕಾರ್ಮಿಕರು ತಂಗಿರುವ ಸ್ಥಳಕ್ಕೆ ಅಧಿಕಾರಿಗಳ ಜತೆಗೂಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮೊದಲಿಗೆ ಸರ್ಕಾರಿ ಅತಿಥಿಗೃಹದ ಪಕ್ಕದಲ್ಲಿ ನಿರ್ಮಿಸಲಾಗುತ್ತಿರುವ ಜಿಲ್ಲಾಡಳಿತದ ಸಂಕೀರ್ಣದಲ್ಲಿದ್ದ ಕಾರ್ಮಿಕರನ್ನು ಭೇಟಿಯಾಗಿ ಅಲ್ಲಿ ಒದಗಿಸಲಾಗಿರುವ ಸೌಲಭ್ಯಗಳನ್ನ ಪರಿಶೀಲಿಸಿದರು.

ನಂತರ ಮುಂಡರಗಿ ಬಳಿ‌‌ ನಿರ್ಮಿಸಲಾಗುತ್ತಿರುವ ಆಶ್ರಯ ಬಡಾವಣೆಯಲ್ಲಿದ್ದ ಕಾರ್ಮಿಕರನ್ನು ಭೇಟಿಯಾಗಿ ಅವರ ಅಹವಾಲುಗಳನ್ನು ಆಲಿಸಿದರು.

ADVERTISEMENT

ಕಾರ್ಮಿಕರಿಗೆ ಶೌಚಾಲಯ ಮತ್ತು ಅಗತ್ಯ ಸೌಕರ್ಯ ಕಲ್ಪಿಸಬೇಕು ಎಂದು ಗುತ್ತಿಗೆದಾರರಿಗೆ ಸೂಚಿಸಿದರು.

ಕೋವಿಡ್-19 ಹಿನ್ನೆಲೆ ಕಾರ್ಮಿಕರು ಚಿಂತಿತರಾಗುವುದು ಬೇಡ, ಅರಾಮವಾಗಿ ಇಲ್ಲಿಯೇ ಇರಿ ನಿಮಗೆ ಬೇಕಾದ ಅಗತ್ಯ ವಸತಿ ಮತ್ತು ಊಟ ಹಾಗೂ ಇನ್ನೀತರ ಸೌಕರ್ಯಗಳನ್ನು ಈಗಾಗಲೇ ಕಲ್ಪಿಸಲಾಗಿದೆ. ಎರಡ್ಮೂರು ದಿನಗಳಲ್ಲಿ ಮತ್ತೆ ಪರಿಶೀಲನೆಗೆ ಬರುವೆ ಎಂದರು.

ಜಿಲ್ಲಾ ಕಾರ್ಮಿಕ ಅಧಿಕಾರಿ ಚಂದ್ರಶೇಖರ್ ಐಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.