ADVERTISEMENT

ಕೋವಿಡ್-19: ಹೊಸಪೇಟೆಯಲ್ಲಿ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಂದ ಮನೆ-ಮನೆ ಸಮೀಕ್ಷೆ

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2020, 9:39 IST
Last Updated 1 ಏಪ್ರಿಲ್ 2020, 9:39 IST
   

ಬಳ್ಳಾರಿ: ಹೊಸಪೇಟೆಯಲ್ಲಿ ಮೂರು ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಇಡೀ‌ ಹೊಸಪೇಟೆ ನಗರವನ್ನೇ ಸಂಪೂರ್ಣ ಕಂಟೈನ್ಮೆಂಟ್ ಝೋನ್ ಆಗಿ ಪರಿವರ್ತಿಸಿದ್ದು, ಈ ನಗರದ ಪ್ರತಿ ಮನೆಮನೆಗೂ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ತಂಡ ಭೇಟಿ ನೀಡಿ ಸಮೀಕ್ಷೆ ನಡೆಸುತ್ತಿದೆ.

ವಯಸ್ಸಾದವರು ಹಾಗೂ ಆರೋಗ್ಯ ಸರಿಯಿಲ್ಲದವರನ್ನು ಹೊರತುಪಡಿಸಿ ಸುಮಾರು 500 ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರನ್ನು ಮನೆ ಮನೆ ಭೇಟಿ ಸಮೀಕ್ಷೆಗೆ ಬಳಸಿಕೊಳ್ಳಲಾಗುತ್ತಿದೆ.

ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡಿ ಸಮೀಕ್ಷೆ ಮಾಡುತ್ತಿದ್ದು, ಆ ಮನೆಗಳಲ್ಲಿ ಯಾರಿಗಾದರೂ ಕೆಮ್ಮು, ನೆಗಡಿ, ಜ್ವರ ಇತ್ಯಾದಿ ಲಕ್ಷಣಗಳಿದ್ದಲ್ಲಿ ತಕ್ಷಣ ಆರೋಗ್ಯ ಇಲಾಖೆಯ ಗಮನಕ್ಕೆ ತರುವ ಕೆಲಸ ಮಾಡಲಾಗುತ್ತಿದೆ.
ಮನೆ ಮನೆ ಭೇಟಿ ಸಮೀಕ್ಷಾ ಕಾರ್ಯಕ್ಕೆ ಜನರು ಇಂತಹ ಸಂದರ್ಭದಲ್ಲಿ ಸಹಕರಿಸಬೇಕು ಎಂದು ಡಿಸಿ ನಕುಲ್ ಅವರು ಮನವಿ ಮಾಡಿದ್ದಾರೆ.

ADVERTISEMENT

ಯಾರಿಗಾದರೂ ಕೆಮ್ಮು, ನೆಗಡಿ, ಜ್ವರದ ಲಕ್ಷಣಗಳು ಇದ್ದಲ್ಲಿ ಅವರಿಗಾಗಿಯೇ ಕ್ಲಿನಿಕ್ ಆರಂಭಿಸಲಾಗಿದ್ದು, ಆಕಾಶವಾಣಿ ಹತ್ತಿರ, ಟಿಬಿ ಡ್ಯಾಂ ಹೆಲ್ತ್ ಸೆಂಟರ್, ಹೊಸ ಎಂಸಿಎಚ್ ಆಸ್ಪತ್ರೆಯಲ್ಲಿ ವಿಶೇಷ ತಪಾಸಣೆ ನಡೆಯುತ್ತಿದ್ದು, ಲಕ್ಷಣಗಳು ಇದ್ದವರು ಬಂದು ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಅವರು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.