ADVERTISEMENT

ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿಗೆ ಕೋವಿಡ್‌-19

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2020, 16:32 IST
Last Updated 4 ಆಗಸ್ಟ್ 2020, 16:32 IST
ಪ್ರೊ. ಸ.ಚಿ. ರಮೇಶ
ಪ್ರೊ. ಸ.ಚಿ. ರಮೇಶ   

ಹೊಸಪೇಟೆ: ಇಲ್ಲಿನ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಸ.ಚಿ. ರಮೇಶ ಅವರಿಗೆ ಮಂಗಳವಾರ ಕೋವಿಡ್‌–19 ದೃಢಪಟ್ಟಿದೆ.

ವಿಶ್ವವಿದ್ಯಾಲಯದ ಪರಿಸರದಲ್ಲಿರುವ ಅವರ ಮನೆಗೆ ಆರೋಗ್ಯ ಇಲಾಖೆಯ ಸಿಬ್ಬಂದಿ ಸಂಜೆ ಸೋಂಕು ನಿರೋಧಕ ದ್ರಾವಣ ಸಿಂಪಡಿಸಿದ್ದಾರೆ. ಸೋಮವಾರದಿಂದಲೇ (ಆ.3) ಅನ್ವಯಿಸುವಂತೆ ವಿಶ್ವವಿದ್ಯಾಲಯದ ಎಲ್ಲ ಸಿಬ್ಬಂದಿಗೆ ಐದು ದಿನ ರಜೆ ಘೋಷಿಸಲಾಗಿದೆ.

‘ರಮೇಶ ಅವರು ಆ. 1ರಂದು ಆಂಟಿಜನ್‌ ಪರೀಕ್ಷೆ ಮಾಡಿಸಿಕೊಂಡಾಗ ನೆಗೆಟಿವ್‌ ಬಂದಿತ್ತು. ಗಂಟಲ ದ್ರವದ ಪರೀಕ್ಷೆಯಿಂದ ಕೋವಿಡ್‌ ಇರುವುದು ದೃಢಪಟ್ಟಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ’ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.