ADVERTISEMENT

ಜನಾರ್ದನರೆಡ್ಡಿ ಹುಟ್ಟುಹಬ್ಬದಲ್ಲಿ ಕೋವಿಡ್‌ ನಿಯಮ ಉಲ್ಲಂಘನೆ ಆರೋಪ

ಜಾಣ ಕುರುಡು ಪ್ರದರ್ಶಿಸಿದ ಜಿಲ್ಲಾಡಳಿತ?

​ಪ್ರಜಾವಾಣಿ ವಾರ್ತೆ
Published 12 ಜನವರಿ 2022, 19:55 IST
Last Updated 12 ಜನವರಿ 2022, 19:55 IST
ಬಳ್ಳಾರಿಯ ಕನಕ ದುರ್ಗಮ್ಮ ದೇವಸ್ಥಾನದಲ್ಲಿ ಮಂಗಳವಾರ ನಡೆದ ಮಾಜಿ ಸಚಿವ ಜನಾರ್ದನರೆಡ್ಡಿ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಸೇರಿದ್ದ ಅಭಿಮಾನಿಗಳು. ಸಾರಿಗೆ ಸಚಿವ ಬಿ. ಶ್ರೀರಾಮುಲು ಚಿತ್ರದಲ್ಲಿದ್ದಾರೆ.
ಬಳ್ಳಾರಿಯ ಕನಕ ದುರ್ಗಮ್ಮ ದೇವಸ್ಥಾನದಲ್ಲಿ ಮಂಗಳವಾರ ನಡೆದ ಮಾಜಿ ಸಚಿವ ಜನಾರ್ದನರೆಡ್ಡಿ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಸೇರಿದ್ದ ಅಭಿಮಾನಿಗಳು. ಸಾರಿಗೆ ಸಚಿವ ಬಿ. ಶ್ರೀರಾಮುಲು ಚಿತ್ರದಲ್ಲಿದ್ದಾರೆ.   

ಬಳ್ಳಾರಿ: ಇಲ್ಲಿನ ಕನಕ ದುರ್ಗಮ್ಮ ದೇವಸ್ಥಾನದಲ್ಲಿ ಮಂಗಳವಾರ ಏರ್ಪಡಿಸಿದ್ದ ಮಾಜಿ ಸಚಿವ ಜಿ. ಜನಾರ್ದನರೆಡ್ಡಿ ಹುಟ್ಟುಹಬ್ಬದ ವೇಳೆ ಕೋವಿಡ್‌ ನಿಯಮಾವಳಿ ಉಲ್ಲಂಘಿಸಿದ್ದರೂ ಕಾನೂನು ಕ್ರಮ ಕೈಗೊಳ್ಳದೆ ಜಿಲ್ಲಾಡಳಿತ ‘ಜಾಣ ಕುರುಡು’ ಪ್ರದರ್ಶಿಸುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ.

ಅಕ್ರಮ ಗಣಿಗಾರಿಕೆ ಆರೋಪದ ಮೇಲೆ ಬಂಧಿತರಾಗಿ, ಜಾಮೀನು ಪಡೆದು ಬಿಡುಗಡೆ ಆಗಿರುವ ಜನಾರ್ದನರೆಡ್ಡಿ ಮಂಗಳವಾರ ಮೊದಲ ಬಾರಿಗೆ ಸಾರ್ವಜನಿಕವಾಗಿ ಪ್ರತ್ಯಕ್ಷವಾಗಿ, ಕನಕ ದುರ್ಗಮ್ಮ ದೇವಸ್ಥಾನದಲ್ಲಿ ತುಲಾಭಾರ ಮಾಡಿಸಿಕೊಂಡು 55ನೇ ಹುಟ್ಟುಹಬ್ಬ ಆಚರಿಸಿಕೊಂಡರು.

ನೂರಾರು ಸಂಖ್ಯೆಯಲ್ಲಿದ್ದ ರೆಡ್ಡಿ ಅಭಿಮಾನಿಗಳು ಮತ್ತು ಬೆಂಬಲಿಗರ ನಡುವೆ ಸಾರಿಗೆ ಸಚಿವ ಬಿ. ಶ್ರೀರಾಮುಲು, ಬಳ್ಳಾರಿ ನಗರದ
ಶಾಸಕ ಸೋಮಶೇಖರರೆಡ್ಡಿ, ಬಳ್ಳಾರಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪಾಲಣ್ಣ ಸೇರಿದಂತೆ ಅನೇಕ ಗಣ್ಯರು ಹಾಜರಿದ್ದರು. ಈ ಸಮಯದಲ್ಲಿ ಅನೇಕರು ಮಾಸ್ಕ್‌ ಹಾಕಿರಲಿಲ್ಲ. ಪರಸ್ಪರ ಅಂತರ ಕಾಪಾಡಲಿಲ್ಲ ಧಾರ್ಮಿಕ ಇಲಾಖೆ ಅಧಿಕಾರಿಗಳು, ಆಡಳಿತ ಮಂಡಳಿ ಸದಸ್ಯರು ಮತ್ತು ಪೊಲೀಸ್‌ ಅಧಿಕಾರಿಗಳು ಸ್ಥಳದಲ್ಲಿದ್ದರೂ ಕ್ರಮ ಕೈಗೊಂಡಿಲ್ಲ ಎಂಬ ಟೀಕೆಗಳು ವ್ಯಕ್ತವಾಗಿವೆ.

ADVERTISEMENT

ರೆಡ್ಡಿ ವಿರುದ್ಧ ಎಫ್‌ಐಆರ್‌ಗೆ ಆಗ್ರಹ:‘ಜನಾರ್ದನರೆಡ್ಡಿ ಸಾರ್ವಜನಿಕವಾಗಿ ಹುಟ್ಟುಹಬ್ಬ ಆಚರಿಸಿಕೊಂಡು ಕೋವಿಡ್‌ ನಿಯಯ ಉಲ್ಲಂಘಿಸಿದ್ದಾರೆ. ಅವರ ವಿರುದ್ಧ ಜಿಲ್ಲಾಡಳಿತ ಎಫ್‌ಐಆರ್‌ ದಾಖಲಿಸಬೇಕು’ ಎಂದುಅಕ್ರಮ ಗಣಿಗಾರಿಕೆ ವಿರುದ್ಧ ಹೋರಾಡುತ್ತಿರುವ ಉದ್ಯಮಿ ಟಪಾಲ್‌ ಗಣೇಶ್ ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.