ADVERTISEMENT

ಕನ್ನಡ ವಿ.ವಿ. ವಿರುದ್ಧ ಆರೋಪನ್ಯಾಯಾಂಗ ತನಿಖೆಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2021, 13:16 IST
Last Updated 29 ನವೆಂಬರ್ 2021, 13:16 IST
ಸಿಪಿಐ(ಎಂ) ಪಕ್ಷದ ಕಾರ್ಯಕರ್ತರು ಸೋಮವಾರ ಹೊಸಪೇಟೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು
ಸಿಪಿಐ(ಎಂ) ಪಕ್ಷದ ಕಾರ್ಯಕರ್ತರು ಸೋಮವಾರ ಹೊಸಪೇಟೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು   

ಹೊಸಪೇಟೆ(ವಿಜಯನಗರ): ಇಲ್ಲಿನ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಹಗರಣ ನಡೆದಿವೆ ಎಂಬ ಆರೋಪ ಕೇಳಿ ಬಂದಿದ್ದು, ಅದರ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕೆಂದು ಸಿಪಿಐ(ಎಂ) ಆಗ್ರಹಿಸಿದೆ.

ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಬಳಿಕ ಡಿ.ಸಿ.ಗೆ ಮನವಿ ಪತ್ರ ಸಲ್ಲಿಸಿದರು.

‘ಕನ್ನಡ ವಿಶ್ವವಿದ್ಯಾಲಯದ ಘನತೆಗೆ ಕುಂದು ತರುವಂಥ ಆರೋಪಗಳು ಮಾಧ್ಯಮಗಳ ಮೂಲಕ ಹೊರಬರುತ್ತಿರುವುದು ನಾಡಿನ ಸಾಕ್ಷಿಪ್ರಜ್ಞೆಯನ್ನು ಪ್ರಶ್ನಿಸುವಂತೆ ಮಾಡಿದೆ. ಇತರೆ ವಿಶ್ವವಿದ್ಯಾಲಯಗಳಿಗಿಂತ ಭಿನ್ನವಾಗಿರುವ ಕನ್ನಡ ವಿಶ್ವವಿದ್ಯಾಲಯದಲ್ಲಿ ನಡೆದಿದೆ ಎನ್ನಲಾಗುವ ಹಗರಣಗಳ ಆರೋಪವನ್ನು ಸಮಗ್ರ ನ್ಯಾಯಾಂಗ ತನಿಖೆಗೆ ಒಳಪಡಿಸಿ ಸರಿಪಡಿಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡದೆ ನಡೆಸುತ್ತಿರುವ ನೇಮಕಾತಿ ಪ್ರಕ್ರಿಯೆಯನ್ನು ನಿಲ್ಲಿಸಿ, ಸಂಶೋಧನಾ ವಿದ್ಯಾರ್ಥಿಗಳಿಗೆ ನೀಡಬೇಕಾದ ಮೂರುವರ್ಷಗಳ ಫೆಲೋಶಿಪ್ ನೀಡಬೇಕು’ ಎಂದು ಒತ್ತಾಯಿಸಿದರು.

ADVERTISEMENT

ಪಕ್ಷದ ಜಿಲ್ಲಾ ಕಾರ್ಯದರ್ಶಿ ಆರ್.ಭಾಸ್ಕರ್ ರೆಡ್ಡಿ, ಮುಖಂಡರಾದ ಎಂ.ಜಂಬಯ್ಯ ನಾಯಕ, ಎಂ.ಗೋಪಾಲ, ಸ್ವಾಮಿ, ಬಿ.ಮಾಳಮ್ಮ, ಕೆ.ನಾಗರತ್ನಮ್ಮ, ಕೆ.ಎಂ.ಸ್ವಪ್ನಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.