ADVERTISEMENT

ನೆರೆ ಸಂತ್ರಸ್ತರಿಗೆ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2019, 8:46 IST
Last Updated 14 ಅಕ್ಟೋಬರ್ 2019, 8:46 IST
ಸಿಪಿಎಂ ಕಾರ್ಯಕರ್ತರು ಸೋಮವಾರ ಹೊಸಪೇಟೆ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು–ಪ್ರಜಾವಾಣಿ ಚಿತ್ರ
ಸಿಪಿಎಂ ಕಾರ್ಯಕರ್ತರು ಸೋಮವಾರ ಹೊಸಪೇಟೆ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು–ಪ್ರಜಾವಾಣಿ ಚಿತ್ರ   

ಹೊಸಪೇಟೆ: ನೆರೆ ಸಂತ್ರಸ್ತರಿಗೆ ಕೂಡಲೇ ಕೇಂದ್ರ ಸರ್ಕಾರ ಪರಿಹಾರ ನೀಡಬೇಕೆಂದು ಆಗ್ರಹಿಸಿ ಸಿಪಿಎಂ ಕಾರ್ಯಕರ್ತರು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಶ್ರಮಿಕ ಭವನದಿಂದ ಪ್ರಮುಖ ಮಾರ್ಗಗಳ ಮೂಲಕ ತಾಲ್ಲೂಕು ಕಚೇರಿ ವರೆಗೆ ಘೋಷಣೆಗಳನ್ನು ಕೂಗುತ್ತ ರ್‍ಯಾಲಿ ನಡೆಸಿದರು. ನಂತರ ತಹಶೀಲ್ದಾರ್‌ ಡಿ.ಜಿ. ಹೆಗಡೆ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ನಿರುದ್ಯೋಗಿಗಳಿಗೆ ಕೇಂದ್ರ ಸರ್ಕಾರ ನಿರುದ್ಯೋಗ ಭತ್ಯೆ ನೀಡಬೇಕು. ಉದ್ಯೋಗ ಸೃಷ್ಟಿಸಲು ಹೂಡಿಕೆ ಹೆಚ್ಚಿಸಬೇಕು. ಅಸಂಘಟಿತ ಕಾರ್ಮಿಕರಿಗೆ ಕನಿಷ್ಠ ₹18,000 ವೇತನ ನಿಗದಿಪಡಿಸಬೇಕು. ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ಖಾಸಗೀಕರಣಕ್ಕೆ ಕೈಹಾಕಬಾರದು. ಉದ್ಯೋಗ ಖಾತ್ರಿ ಯೋಜನೆಯಡಿ ನೀಡುತ್ತಿರುವ ಕೆಲಸದ ದಿನಗಳನ್ನು 200ಕ್ಕೆ ಹೆಚ್ಚಿಸಬೇಕು. ಕೃಷಿ ಬಿಕ್ಕಟ್ಟಿನಿಂದ ರೈತರನ್ನು ಪಾರು ಮಾಡಲು ಸಂಪೂರ್ಣ ಸಾಲ ಮನ್ನಾ ಮಾಡಬೇಕು. ವೃದ್ಧಾಪ್ಯ ಮತ್ತು ವಿಧವಾ ವೇತನವನ್ನು ₹3,000ಕ್ಕೆ ಏರಿಸುವುದು ಪ್ರಮುಖ ಬೇಡಿಕೆಗಳಾಗಿವೆ.

ADVERTISEMENT

ಪಕ್ಷದ ಜಿಲ್ಲಾ ಕಾರ್ಯದರ್ಶಿ ಆರ್‌. ಭಾಸ್ಕರ್‌ ರೆಡ್ಡಿ, ಮುಖಂಡರಾದ ಯಲ್ಲಾಲಿಂಗ, ಬಿ. ಸ್ವಾಮಿ, ಕೆ. ನಾಗರತ್ನಮ್ಮ, ಶಕುಂತಲಾ, ಕೆ.ಎಂ. ಸ್ವಪ್ನಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.