ಹರಪನಹಳ್ಳಿ: ಪಟ್ಟಣದ ಹಳೇ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಕಂದಾಯ ಇಲಾಖೆಯಿಂದ ಹರಪನಹಳ್ಳಿ ಹೋಬಳಿ ಪಿಂಚಣಿ ಅದಾಲತ್ ಜರುಗಿತು.
ಚಾಲನೆ ನೀಡಿದ ಉಪವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ ಮಾತನಾಡಿ, ಕಂದಾಯ ಇಲಾಖೆ ಆರಂಭಿಸಿರುವ ಪಿಂಚಣಿ ಅದಾಲತ್ ಯೋಜನೆ ಬಡವರಿಗೆ ಅನುಕೂಲವಾಗಿದೆ. ಜನರನ್ನು ಅಲೆದಾಡಿಸುವ ಬದಲು ಸ್ಥಳದಲ್ಲೇ ಪರಿಹಾರ ಸೂಚಿಸಲಾಗುವುದು. ಸಾರ್ವಜನಿಕರು ಇದನ್ನು ಸದ್ಬಳಕೆ ಮಾಡಿಕೊಳ್ಳಿ ಎಂದು ಸಲಹೆ ನೀಡಿದರು.
ಗ್ರೇಡ್– 2 ತಹಶೀಲ್ದಾರ ನಟರಾಜ್ ಮಾತನಾಡಿದರು. 60ಕ್ಕೂ ಹೆಚ್ಚು ಫಲಾನುಭವಿಗಳಿಗೆ ವಿವಿಧ ಸರ್ಕಾರಿ ಸವಲತ್ತುಗಳ ಪ್ರಮಾಣ ಪತ್ರ ವಿತರಿಸಲಾಯಿತು. ಹೋಬಳಿಯ ಕಂದಾಯ ನಿರೀಕ್ಷಕ ರಾಘವೇಂದ್ರ ಪ್ರಸಾದ್, ಗ್ರಾಮ ಆಡಳಿತ ಅಧಿಕಾರಿ ಶಶಿಕುಮಾರ ಗುಡಿಯಪ್ಪರ, ಯು.ಯರಿಸ್ವಾಮಿ ಮತ್ತು ಕಂದಾಯ ಸಿಬ್ಬಂದಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.