ADVERTISEMENT

ಬೆಳೆ ವಿಮೆ ಯೋಜನೆ; ನೋಂದಣಿಗೆ ರೈತರಿಗೆ ಸಲಹೆ

​ಪ್ರಜಾವಾಣಿ ವಾರ್ತೆ
Published 24 ಮೇ 2022, 12:58 IST
Last Updated 24 ಮೇ 2022, 12:58 IST

ಹೊಸಪೇಟೆ/ಬಳ್ಳಾರಿ: ಪ್ರಸಕ್ತ ಸಾಲಿನಲ್ಲಿ ಅವಳಿ ಜಿಲ್ಲೆಗಳಲ್ಲಿ ಮುಂಗಾರು ಹಂಗಾಮಿನಲ್ಲಿ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಜಾರಿಗೊಳಿಸಲಾಗುತ್ತಿದ್ದು, ಅರ್ಹ ರೈತರು ವಿಮೆಗೆ ನೋಂದಣಿ ಮಾಡಿಸಿಕೊಳ್ಳಬಹುದು ಎಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಎಸ್.ಪಿ.ಭೋಗಿ ತಿಳಿಸಿದ್ದಾರೆ.

ವಿಮೆಗೆ ಒಳಪಡುವ ಬೆಳೆಗಳು:

ಹಸಿ ಮೆಣಸಿನಕಾಯಿ ಬೆಳೆಯುವ ಬಳ್ಳಾರಿ, ಹಗರಿಬೊಮ್ಮನಹಳ್ಳಿ, ಹೂವಿನಹಡಗಲಿ, ಹೊಸಪೇಟೆ, ಕೂಡ್ಲಿಗಿ, ಸಂಡೂರು, ಸಿರುಗುಪ್ಪ, ಕೊಟ್ಟೂರು, ಕಂಪ್ಲಿ, ಕುರುಗೋಡು ವಿಮೆಗೆ ಒಳಪಡುವ ಪ್ರದೇಶಗಳಾಗಿವೆ. ಪ್ರತಿ ಹೆಕ್ಟೇರ್‌ಗೆ ವಿಮೆ ಮೊತ್ತ ₹71 ಸಾವಿರ ಹಾಗೂ ರೈತರು ಪಾವತಿಸಬೇಕಾದ ವಿಮೆ ಕಂತಿನ ದರ ಶೇ 5 ರಂತೆ ₹3,550.

ADVERTISEMENT

ದಾಳಿಂಬೆ ಬೆಳೆಯುವ ಬಳ್ಳಾರಿ, ಹಗರಿಬೊಮ್ಮನಹಳ್ಳಿ, ಹಡಗಲಿ, ಹೊಸಪೇಟೆ, ಕೂಡ್ಲಿಗಿ, ಸಂಡೂರು, ಸಿರುಗುಪ್ಪ, ಕೊಟ್ಟೂರು, ಕಂಪ್ಲಿ, ಕುರುಗೋಡು, ಹರಪನಹಳ್ಳಿ ವಿಮೆಗೆ ಒಳಪಡುವ ಪ್ರದೇಶಗಳಾಗಿದ್ದು, ಪ್ರತಿ ಹೆಕ್ಟೇರ್‌ಗೆ ವಿಮೆ ಮೊತ್ತ ₹1.27 ಲಕ್ಷ, ರೈತರು ಶೇ 5ರಂತೆ ₹6,350 ವಿಮೆ ಕಂತು ಪಾವತಿಸಬೇಕು.

ಅಡಿಕೆ ಬೆಳೆಯುವ ಹರಪನಹಳ್ಳಿ ಪ್ರದೇಶದಲ್ಲಿ ಪ್ರತಿ ಹೆಕ್ಟೇರ್‌ಗೆ ವಿಮೆ ಮೊತ್ತ ₹1.28 ಲಕ್ಷಗಳಾಗಿದ್ದು, ಶೇ 5ರಂತೆ ರೈತರು 6,400 ಕಂತಿನ ದರ ಪಾವತಿ ಮಾಡಬೇಕು. ಅಗತ್ಯ ದಾಖಲೆಗಳಾದ ಅರ್ಜಿ ಪತ್ರ, ಪಹಣಿ, ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಪಾಸ್ ಪುಸ್ತಕದ ನಕಲು ಪ್ರತಿ ಹಾಗೂ ಸ್ವಯಂ ಘೋಷಿತ ಬೆಳೆ ದೃಢೀಕರಣ ಪತ್ರಗಳೊಂದಿಗೆ ಜೂ.30ರ ವರೆಗೆ ವಿಮೆಗೆ ನೋಂದಣಿ ಮಾಡಿಸಿಕೊಳ್ಳಬಹುದು ಎಂದು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ ಸಮೀಪದ ಬ್ಯಾಂಕ್ ಶಾಖೆ, ಜಿಲ್ಲಾ ತೋಟಗಾರಿಕೆ ಕಚೇರಿ ಅಥವಾ ತಾಲ್ಲೂಕಿನ ತೋಟಗಾರಿಕೆ ಕಚೇರಿ ಅಥವಾ ಹೋಬಳಿ ಮಟ್ಟದ ಸಹಾಯಕ ತೋಟಗಾಕೆ ಅಧಿಕಾರಿಗಳನ್ನು ಸಂಪರ್ಕಿಸಬಹುದು. ಬಳ್ಳಾರಿ ತೋಟಗಾರಿಕೆ ಉಪ ನಿರ್ದೇಶಕ, ದೂರವಾಣಿ ಸಂಖ್ಯೆ: 08392-278179, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ದೂ:08392-278177, ಹೂವಿನ ಹಡಗಲಿಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ದೂ:08399-240136, ಹಗರಿಬೊಮ್ಮನಹಳ್ಳಿಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ದೂ:08397 -238396, ಹೊಸಪೇಟೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ದೂ:08394 -222414, ಕೂಡ್ಲಿಗಿಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ದೂ:08391-220258, ಸಂಡೂರಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ದೂ:08395 -260389, ಸಿರುಗುಪ್ಪದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ದೂ:08396 -222066, ಹರಪನಹಳ್ಳಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ದೂ:03898 -280076 ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.