ADVERTISEMENT

ಬೆಳೆ ಪರಿಹಾರ: ರೈತರ ಖಾತೆಗೆ ಜಮೆ

​ಪ್ರಜಾವಾಣಿ ವಾರ್ತೆ
Published 1 ಫೆಬ್ರುವರಿ 2024, 15:20 IST
Last Updated 1 ಫೆಬ್ರುವರಿ 2024, 15:20 IST

ಹೂವಿನಹಡಗಲಿ: ತಾಲ್ಲೂಕಿನಲ್ಲಿ ಮುಂಗಾರಿನಲ್ಲಿ ಹಾನಿಗೀಡಾಗಿರುವ ಬೆಳೆಗಳಿಗೆ ಮೊದಲ ಕಂತಿನ ಬೆಳೆಹಾನಿ ಪರಿಹಾರ ₹2,000 ಅನ್ನು ರೈತರ ಬ್ಯಾಂಕ್ ಖಾತೆಗಳಿಗೆ ಸರ್ಕಾರ ನೇರವಾಗಿ ಪಾವತಿಸಿದೆ.

ಕೇಂದ್ರ, ರಾಜ್ಯ ಸರ್ಕಾರದ ಪ್ರಕೃತಿ ವಿಕೋಪ ಪರಿಹಾರ ನಿಧಿಯ ಮಾರ್ಗಸೂಚಿ ಅನುಸಾರ ಎಫ್ಐಡಿ ಹೊಂದಿರುವ ಅರ್ಹ ರೈತರಿಗೆ ಹೆಚ್ಚುವರಿ ಪರಿಹಾರವನ್ನು ಮುಂದಿನ ದಿನಗಳಲ್ಲಿ ಪಾವತಿಸಲಾಗುತ್ತದೆ. ಪರಿಹಾರ ತಂತ್ರಾಂಶದ ಮೂಲಕ ಮೊದಲ ಕಂತಿನ ಬೆಳೆ ಪರಿಹಾರ ವಿತರಿಸುವ ಕಾರ್ಯ ಪ್ರಗತಿಯಲ್ಲಿದ್ದು, ರೈತರು ಹೆಚ್ಚಿನ ಮಾಹಿತಿಗೆ ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಯನ್ನು ಸಂಪರ್ಕಿಸಬೇಕು ಎಂದು ತಹಶೀಲ್ದಾರ್ ವಿ. ಕಾರ್ತಿಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT