ADVERTISEMENT

ಹೊಸಪೇಟೆ: ತುಂಗಭದ್ರಾ ಜಲಾಶಯದಿಂದ ನದಿಗೆ ನೀರು

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2019, 16:12 IST
Last Updated 6 ಅಕ್ಟೋಬರ್ 2019, 16:12 IST
ಹೊಸಪೇಟೆ ಸಮೀಪದ ತುಂಗಭದ್ರಾ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ತೆರೆದು ಭಾನುವಾರ ನದಿಗೆ ನೀರು ಹರಿಸಲಾಯಿತು–ಪ್ರಜಾವಾಣಿ ಚಿತ್ರ
ಹೊಸಪೇಟೆ ಸಮೀಪದ ತುಂಗಭದ್ರಾ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ತೆರೆದು ಭಾನುವಾರ ನದಿಗೆ ನೀರು ಹರಿಸಲಾಯಿತು–ಪ್ರಜಾವಾಣಿ ಚಿತ್ರ   

ಹೊಸಪೇಟೆ: ಇಲ್ಲಿನ ತುಂಗಭದ್ರಾ ಜಲಾಶಯದಿಂದ ಭಾನುವಾರ ನದಿಗೆ ನೀರು ಹರಿಸಲಾಯಿತು.

ಒಟ್ಟು ಮೂರು ಕ್ರಸ್ಟ್‌ಗೇಟ್‌ಗಳನ್ನು ತೆರೆದು ನೀರು ಹೊರಬಿಡಲಾಗುತ್ತಿದೆ. ಒಂದೊಂದು ಗೇಟು ತಲಾ ಒಂದು ಅಡಿ ವರೆಗೆ ಮೇಲಕ್ಕೆ ತೆಗೆದು 4,611 ಕ್ಯುಸೆಕ್‌ ನೀರು ಹರಿಸಲಾಗುತ್ತಿದೆ.

133 ಟಿ.ಎಂ.ಸಿ. ಅಡಿ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಸದ್ಯ 100.855 ಟಿ.ಎಂ.ಸಿ. ಅಡಿ ನೀರು ಸಂಗ್ರಹಗೊಂಡಿದ್ದು, 32 ಟಿ.ಎಂ.ಸಿ. ಅಡಿಗೂ ಅಧಿಕ ಹೂಳು ತುಂಬಿಕೊಂಡಿದೆ.

ADVERTISEMENT

ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಒಳಹರಿವು ಇರುವ ಕಾರಣ ನದಿಗೆ ನೀರು ಬಿಡಲಾಗುತ್ತಿದೆ. ಭಾನುವಾರ 12,301 ಕ್ಯುಸೆಕ್‌ ಒಳಹರಿವು, 12,376 ಕ್ಯುಸೆಕ್‌ ಹೊರಹರಿವು ದಾಖಲಾಗಿದೆ. 7,765 ಕ್ಯುಸೆಕ್‌ ನೀರು ಎಲ್ಲಾ ಕಾಲುವೆಗಳಿಗೆ ಹರಿಸಲಾಗುತ್ತಿದೆ.

‘ಒಳಹರಿವು ನೋಡಿಕೊಂಡು ನದಿಗೆ ನೀರು ಹರಿಸಲಾಗುವುದು. ದಸರಾ ರಜೆ ಹಿನ್ನೆಲೆಯಲ್ಲಿ ವಿವಿಧ ಕಡೆಗಳಿಂದ ಅನೇಕ ಅಣೆಕಟ್ಟೆ ನೋಡಲು ಜನ ಬರುತ್ತಾರೆ. ಆಯುಧ ಪೂಜೆ, ವಿಜಯದಶಮಿ ದಿನ ಎಲ್ಲಾ ಕ್ರಸ್ಟ್‌ಗೇಟ್‌ಗಳನ್ನು ತೆರೆದು ನದಿಗೆ ನೀರು ಹರಿಸಲು ಚಿಂತನೆ ನಡೆದಿದ್ದು, ಇನ್ನಷ್ಟೇ ತೀರ್ಮಾನವಾಗಬೇಕಿದೆ’ ಎಂದು ತುಂಗಭದ್ರಾ ಜಲಾಶಯ ಆಡಳಿತ ಮಂಡಳಿ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.