ADVERTISEMENT

ದರ್ಶನ್ ಸ್ಥಳಾಂತರ ವರದಿ: ಬಳ್ಳಾರಿ ಜೈಲು ಬಳಿ ಅಭಿಮಾನಿಗಳ ದಂಡು

​ಪ್ರಜಾವಾಣಿ ವಾರ್ತೆ
Published 28 ಆಗಸ್ಟ್ 2024, 5:47 IST
Last Updated 28 ಆಗಸ್ಟ್ 2024, 5:47 IST
   

ಬಳ್ಳಾರಿ: ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಸ್ಥಳಾಂತರವಾಗುತ್ತಿರುವ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ನೋಡಲು ಜೈಲು ಬಳಿ ಅಭಿಮಾನಿಗಳು ಜಮಾಯಿಸುತ್ತಿದ್ದಾರೆ.

ನಟ ದರ್ಶನ್ ರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲು ನ್ಯಾಯಾಲಯ ಮಂಗಳವಾರ ಸಂಜೆ ಅನುಮತಿ ನೀಡಿತ್ತು. ಬಹುತೇಕ ಇಂದು (ಬುಧವಾರ) ಸಂಜೆ ಅಥವಾ ರಾತ್ರಿ ಹೊತ್ತಿಗೆ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಕರೆತರುವ ಸಾಧ್ಯತೆಗಳಿವೆ.

ಈ ವಿಷಯ ತಿಳಿದ ಅಭಿಮಾನಿಗಳು ಮುಂಜಾನೆಯಿಂದಲೇ ಜೈಲು ಬಳಿಗೆ ಬರುತ್ತಿದ್ದಾರೆ. ಅವರನ್ನು ನಿಯಂತ್ರಿಸಲು ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ.

ADVERTISEMENT

"ದರ್ಶನ್ ಮೇಲಿನ ಆರೋಪಗಳ ಬಗ್ಗೆ ನಮಗೆ ಗೊತ್ತಿಲ್ಲ. ಅವರನ್ನು ನೋಡಬೇಕಷ್ಟೇ. ಅವರು ಇಲ್ಲಿಗೆ ಬರುತ್ತಿರುವುದೇ ಅದೃಷ್ಟ" ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ.

ಪುನೀತ್ ರಾಜ್ ಕುಮಾರ್ ಅಭಿಮಾನಿಗಳೂ ಜೈಲು ಬಳಿಗೆ ಬರುತ್ತಿರುವುದು ವಿಶೇಷ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.