ADVERTISEMENT

ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಂದ ದರ್ಶನ್‌ ವಿಚಾರಣೆ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2024, 21:55 IST
Last Updated 25 ಸೆಪ್ಟೆಂಬರ್ 2024, 21:55 IST
ದರ್ಶನ್‌
ದರ್ಶನ್‌   

ಬಳ್ಳಾರಿ: ಕೊಲೆ ಪ್ರಕರಣದ ಆರೋಪಿ ದರ್ಶನ್‌ ಅವರನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಗುರುವಾರದಿಂದ ಎರಡು ದಿನ ವಿಚಾರಣೆ ನಡೆಸಲಿದ್ದಾರೆ. 

ಕೊಲೆ ಪ್ರಕರಣದಲ್ಲಿನ ಹಣದ ವಹಿವಾಟಿಗೆ ಸಂಬಂಧಿಸಿದಂತೆ ದರ್ಶನ್‌ ವಿಚಾರಣೆಗೆ ಕೋರ್ಟ್ ಆದೇಶ ನೀಡಿದೆ. ಅದರಂತೆ ತನಿಖೆ ನಡೆಸಲು ಆದಾಯ ತೆರಿಗೆ ಇಲಾಖೆ ಮುಂದಾಗಿದೆ. ಸೆ.26 ಮತ್ತು 27ರಂದು ತನಿಖೆಗೆಂದು ಅಧಿಕಾರಿಗಳು ಬಳ್ಳಾರಿ ಜೈಲಿಗೆ ಬರಲಿದ್ದಾರೆ ಎಂದು ಜೈಲು ಅಧಿಕಾರಿಗಳು ತಿಳಿಸಿದ್ದಾರೆ.

‘ದರ್ಶನ್‌ ಅವರ ವಿಚಾರಣೆಗೆ ಅವಕಾಶ ನೀಡುವಂತೆ ಕೋರಿ ಕೋರ್ಟ್‌ ಆದೇಶದೊಂದಿಗೆ ಆದಾಯ ತೆರಿಗೆ ಇಲಾಖೆಯಿಂದ ನಮಗೆ
ಇ–ಮೇಲ್‌ ಬಂದಿತ್ತು. ನಾವು ವಿಚಾರಣೆಗೆ ಅವಕಾಶ ನೀಡಿದ್ದೇವೆ’ ಎಂದು ಬಳ್ಳಾರಿ ಜೈಲು ಆಧೀಕ್ಷಕಿ ಲತಾ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ. 

ADVERTISEMENT

ದರ್ಶನ್‌ ಅವರ ಪರ ವಕೀಲರು ಬುಧವಾರವೂ ಜೈಲಿಗೆ ಭೇಟಿ ನೀಡಿ 30 ನಿಮಿಷ ಚರ್ಚೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.