ಕಂಪ್ಲಿ: ಎರಡು ವರ್ಷಗಳ ಹಿಂದೆ ಜೈಲಿನಿಂದ ಬಿಡುಗಡೆಯಾದ ಇಲ್ಲಿಯ ಎಂ.ಡಿ ಕ್ಯಾಂಪ್ ನಿವಾಸಿ ದೌಲಸಾಬ್, ಬಾಲಕನೊಬ್ಬನ ಮೇಲೆ ಹಲ್ಲೆ ಮಾಡಿದ ಆರೋಪ ಹಿನ್ನೆಲೆಯಲ್ಲಿ, ಬಳ್ಳಾರಿ ಜಿಲ್ಲೆಯಿಂದ ರಾಮನಗರ ಜಿಲ್ಲೆಯ ಕನಕಪುರಕ್ಕೆ ಮೂರು ತಿಂಗಳು ಗಡಿಪಾರು ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಅಪ್ರಾಪ್ತ ದಲಿತ ಬಾಲಕಿ ಮೇಲೆ ಅತ್ಯಾಚಾರವೆಸಗಿ ಪೋಕ್ಸ್ ಕಾಯ್ದೆಯಡಿ 2014ರಿಂದ 2023ರವರೆಗೆ ದೌಲಸಾಬ್ ಜೈಲು ಶಿಕ್ಷೆ ಅನುಭವಿಸಿ ಬಿಡುಗಡೆಯಾಗಿದ್ದ. ಆದರೂ ಈತ ಪುಂಡಾಟಿಕೆ ಮುಂದುವರಿಸಿದ್ದು, ಸಮಾಜದ ಸಾಸ್ಥ್ಯ ಹಾಳು ಮಾಡುತ್ತಿದ್ದ. ಮೇ 10ರಂದು ಪಟ್ಟಣದ ಶಿಕಾರಿಹಟ್ಟಿಯ ಬಾಲಕನ ಮೇಲೆ ಹಲ್ಲೆ ಮಾಡಿರುವ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣವು ದಾಖಲಾಗಿದೆ.
ಈತನ ಚಟುವಟಿಕೆಯಲ್ಲಿ ಯಾವುದೇ ಸುಧಾರಣೆ ಕಾಣದ ಹಿನ್ನೆಲೆ ಗಡಿಪಾರು ಮಾಡಲು ಜಿಲ್ಲಾಧಿಕಾರಿಗೆ ಮನವಿ ಮಾಡಲಾಗಿತ್ತು ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.