ADVERTISEMENT

ಹೊಸಪೇಟೆ: ಬೈಸಿಕಲ್‌ ತುಳಿದ ಜಿಲ್ಲಾಧಿಕಾರಿ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2019, 9:23 IST
Last Updated 1 ಮಾರ್ಚ್ 2019, 9:23 IST
ಹಂಪಿ ಉತ್ಸವದ ಪ್ರಯುಕ್ತ ಹಮ್ಮಿಕೊಂಡಿದ್ದ ಬೈಸಿಕಲ್‌ ರ್‍ಯಾಲಿಯಲ್ಲಿ ಜಿಲ್ಲಾಧಿಕಾರಿ ರಾಮಪ್ರಸಾದ್‌ ಮನೋಹರ್‌ ಅವರು ಸಾರ್ವಜನಿಕರೊಂದಿಗೆ ಸೈಕಲ್‌ ಓಡಿಸಿದರು–ಪ್ರಜಾವಾಣಿ ಚಿತ್ರ
ಹಂಪಿ ಉತ್ಸವದ ಪ್ರಯುಕ್ತ ಹಮ್ಮಿಕೊಂಡಿದ್ದ ಬೈಸಿಕಲ್‌ ರ್‍ಯಾಲಿಯಲ್ಲಿ ಜಿಲ್ಲಾಧಿಕಾರಿ ರಾಮಪ್ರಸಾದ್‌ ಮನೋಹರ್‌ ಅವರು ಸಾರ್ವಜನಿಕರೊಂದಿಗೆ ಸೈಕಲ್‌ ಓಡಿಸಿದರು–ಪ್ರಜಾವಾಣಿ ಚಿತ್ರ   

ಹೊಸಪೇಟೆ: ’ಹಂಪಿ ಉತ್ಸವ’ದ ಪ್ರಯುಕ್ತ ಶುಕ್ರವಾರ ನಗರದಲ್ಲಿ ಹಮ್ಮಿಕೊಂಡಿದ್ದ ಬೈಸಿಕಲ್‌ ರ್‍ಯಾಲಿಯಲ್ಲಿ ಜಿಲ್ಲಾಧಿಕಾರಿ ರಾಮಪ್ರಸಾದ್‌ ಮನೋಹರ್‌ ಸೈಕಲ್‌ ತುಳಿದರು.

ನಗರದ ಮುನ್ಸಿಪಲ್‌ ಮೈದಾನದಲ್ಲಿ ರ್‍ಯಾಲಿಗೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಬಳಿಕ ಯುವಕರು, ಶಾಲಾ–ಕಾಲೇಜಿನ ವಿದ್ಯಾರ್ಥಿಗಳೊಂದಿಗೆ ಉತ್ಸಾಹದಿಂದ ಬೈಸಿಕಲ್‌ ಓಡಿಸಿದರು.

ಡಾ.ಬಿ.ಆರ್‌. ಅಂಬೇಡ್ಕರ್‌ ವೃತ್ತ, ರೋಟರಿ ವೃತ್ತ, ಸೋಗಿ ಮಾರುಕಟ್ಟೆ, ರಾಮಾ ಟಾಕೀಸ್‌, ವಾಲ್ಮೀಕಿ ವೃತ್ತ, ನೂರು ಹಾಸಿಗೆ ಸರ್ಕಾರಿ ಆಸ್ಪತ್ರೆ ಮೂಲಕ ಹಾದು ಪುನಃ ಮುನ್ಸಿಪಲ್‌ ಮೈದಾನದಲ್ಲಿ ರ್‍ಯಾಲಿ ಕೊನೆಗೊಂಡಿತು.

ADVERTISEMENT

‘ಹಂಪಿ ಉತ್ಸವವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಅದಕ್ಕಾಗಿ ಶಾಲಾ–ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಉಚಿತ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು’ ಎಂದು ಮನವಿ ಮಾಡಿದರು.

ಉಪವಿಭಾಗಾಧಿಕಾರಿ ಪಿ.ಎನ್‌. ಲೋಕೇಶ್‌, ತಹಶೀಲ್ದಾರ್‌ ಎಚ್‌. ವಿಶ್ವನಾಥ್‌, ನಗರಸಭೆ ಪೌರಾಯುಕ್ತ ವಿ. ರಮೇಶ್‌, ತಾಲ್ಲೂಕು ವಾಣಿಜ್ಯ ಮತ್ತು ಕೈಗಾರಿಕೆ ಸಂಸ್ಥೆ ಅಧ್ಯಕ್ಷ ಅಶ್ವಿನ್‌ ಕೋತಂಬ್ರಿ, ರೌಂಡ್‌ ಟೇಬಲ್‌ ಅಧ್ಯಕ್ಷ ರಾಜೇಶ್‌ ಕೋರಿಶೆಟ್ಟರ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.