ADVERTISEMENT

ಕೊಟ್ಟೂರೇಶ್ವರ ದೇವಸ್ಥಾನಕ್ಕೆ ಡಿ.ಸಿ ಭೇಟಿ

​ಪ್ರಜಾವಾಣಿ ವಾರ್ತೆ
Published 26 ಆಗಸ್ಟ್ 2025, 7:15 IST
Last Updated 26 ಆಗಸ್ಟ್ 2025, 7:15 IST
ಕೊಟ್ಟೂರಿನ ಕೊಟ್ಟೂರೇಶ್ವರ ಸ್ವಾಮಿ ದೇವಸ್ಥಾನಕ್ಕೆ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಭಾನುವಾರ ಭೇಟಿ ನೀಡಿ ಪ್ರಸಾದ ನಿಲಯವನ್ನು ವೀಕ್ಷಿಸಿದರು
ಕೊಟ್ಟೂರಿನ ಕೊಟ್ಟೂರೇಶ್ವರ ಸ್ವಾಮಿ ದೇವಸ್ಥಾನಕ್ಕೆ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಭಾನುವಾರ ಭೇಟಿ ನೀಡಿ ಪ್ರಸಾದ ನಿಲಯವನ್ನು ವೀಕ್ಷಿಸಿದರು   

ಕೊಟ್ಟೂರು: ಪಟ್ಟಣದ ಕೊಟ್ಟೂರೇಶ್ವರ ಸ್ವಾಮಿ ದೇವಸ್ಥಾನಕ್ಕೆ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಭಾನುವಾರ ಭೇಟಿ ನೀಡಿ ಸ್ವಾಮಿಯ ದರ್ಶನ ಪಡೆದು, ನಂತರ ಅಭಿವೃದ್ಧಿ ಕಾರ್ಯಗಳನ್ನು ವೀಕ್ಷಿಸಿದರು.

ಈ ವೇಳೆ ಮಾತನಾಡಿದ ಅವರು, ನಾಡಿನಾದ್ಯಂತ ಆಗಮಿಸುವ ಭಕ್ತರಿಗೆ ಮೂಲ ಸೌಕರ್ಯ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

‘ದಾನಿಗಳ ನೆರವಿನಿಂದ ಸ್ವಾಮಿಯ ಬಂಗಾರದ ಮುಖ ಕವಚ, ಗೋಪುರದ ಕಳಸಕ್ಕೆ ಬಂಗಾರದ ಲೇಪನ, ಸ್ವಾಮಿಯ ಗದ್ದುಗೆಗೆ ಬೆಳ್ಳಿ ಕವಚ ನಿರ್ಮಾಣ ಹಾಗೂ ಪಟ್ಟಣದ ನಾಲ್ಕು ದಿಕ್ಕುಗಳಲ್ಲಿ ಸುಸಜ್ಜಿತ ಯಾತ್ರೆ ನಿವಾಸ ಮುಂತಾದ ಅಭಿವೃದ್ಧಿ ಕಾರ್ಯಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು’ ಎಂದರು.

ADVERTISEMENT

ನಿತ್ಯ ಬೆಳಿಗ್ಗೆ 10ರಿಂದ ರಾತ್ರಿ 10 ಗಂಟೆವರೆಗೂ ಭಕ್ತರಿಗೆ ಪ್ರಸಾದ ವ್ಯವಸ್ಥೆ ಆರಂಭಿಸುವಂತೆ ಆದೇಶ ನೀಡಿದ ಹಿನ್ನೆಲೆಯಲ್ಲಿ ಪ್ರಸಾದ ನಿಲಯ ಹಾಗೂ ದಾಸ್ತಾನು ಕೊಠಡಿ ಹಾಗೂ ಮೂಲ ಸೌಕರ್ಯಗಳನ್ನು ಪರಿಶೀಲಿಸಿ ಸೂಕ್ತ ವ್ಯವಸ್ಥೆ ಕಲ್ಪಿಸಿಕೊಳ್ಳುವಂತೆ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಗೆ ಸೂಚಿಸಿದರು.

ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಐ.ಎಂ.ದಾರುಕೇಶ್, ಧರ್ಮಕರ್ತ ಶೇಖರಯ್ಯ, ಅಜ್ಜನಗೌಡ, ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಹನುಮಂತಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.