ADVERTISEMENT

ಸಂಡೂರು: ಕಂಪನಿ, ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ

ಸರ್ಕಾರಿ ಜಾಗದಲ್ಲಿ ಅಕ್ರಮ ಚೆಕ್ ಡ್ಯಾಮ್ ನಿರ್ಮಿಸಿದ ಆರ್‌ಐಪಿಎಲ್ ಕಾರ್ಖಾನೆ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2024, 16:09 IST
Last Updated 21 ಸೆಪ್ಟೆಂಬರ್ 2024, 16:09 IST

ಸಂಡೂರು: ತಾಲ್ಲೂಕಿನ ನರಸಿಂಗಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಆರ್‌ಐಪಿಎಲ್ ಕಾರ್ಖಾನೆಯು ಅಕ್ರಮವಾಗಿ ಚೆಕ್‌ಡ್ಯಾಂ ನಿರ್ಮಿಸಿಕೊಂಡಿದೆ ಎಂದು ಜನ ಸಂಗ್ರಾಮ ಪರಿಷತ್ ಸಂಘಟನೆ ಆರೋಪಿಸಿದೆ.

ಅರಣ್ಯ ಪ್ರದೇಶದಿಂದ ಹರಿದು ಇಲ್ಲಿನ ನಾರಿಹಳ್ಳ ಜಲಾಶಯ ಸೇರುವ ನೀರಿಗೆ ಕೆರೆಯನ್ನು ,ಕೆರೆ ತುಂಬಿದ ನಂತರ ಹರಿಯುವ ನೀರನ್ನು ಅಕ್ರಮವಾಗಿ ಬಳಸಿಕೊಂಡ ಕಾರ್ಖಾನೆ ವಿರುದ್ಧ ಯಾವುದೇ ಕ್ರಮ ಜರುಗಿಸದ ಗ್ರಾಮ ಲೆಕ್ಕಾಧಿಕಾರಿಗಳು ಹಾಗೂ ಕಂದಾಯ ನಿರೀಕ್ಷಕರ ವಿರುದ್ಧ ಕ್ರಮ ಜರುಗಿಸುವಂತೆ ಒತ್ತಾಯಿಸಿ ಸಂಘಟನೆ ಲೋಕಾಯುಕ್ತ ಸಿಪಿಐ ಮಹಮ್ಮದ್ ರಫಿಕ್ ಅವರಿಗೆ ದೂರು ನೀಡಿದೆ.

ಕರ್ನಾಟಕ ಭೂ ಕಂದಾಯ ಅಧಿನಿಯಮ 1964 ರ ಪ್ರಕಾರ ಹರಿಯುವ ನೀರಿಗೆ ತಡೆಗೋಡೆ ನಿರ್ಮಿಸಿಕೊಂಡಿರುವುದು ನಿಯಮದ ಉಲ್ಲಂಘನೆಯಾಗಿದೆ. ಗ್ರಾಮ ಲೆಕ್ಕಾಧಿಕಾರಿ ಮತ್ತು ಕಂದಾಯ ನಿರೀಕ್ಷಕರು ಆಯಾ ಗ್ರಾಮ ವ್ಯಾಪ್ತಿಯ ಸರ್ಕಾರಿ ಜಮೀನು ಅತಿಕ್ರಮಣ, ಅಕ್ರಮ ಕಟ್ಟಡ ನಿರ್ಮಾಣ ತಡೆಯುವುದು ಅವರ ಕರ್ತವ್ಯವಾಗಿದ್ದು ಇಲ್ಲಿ ಅಧಿಕಾರಿಗಳು ತಮ್ಮ ಜವಬ್ದಾರಿ ಮರೆತಿದ್ದಾರೆ. ಹೀಗಾಗಿ ಸಂಬಂಧಿಸಿದ ಅಧಿಕಾರಿಗಳು ಹಾಗೂ ಅಕ್ರಮ ಎಸಗಿರುವ ಕಂಪನಿ ವಿರುದ್ಧ ಕ್ರಮವಹಿಸಬೇಕೆಂದು ಜನ ಸಂಗ್ರಾಮ ಪರಿಷತ್ ಮುಖಂಡ ಶ್ರೀಶೈಲ ಆಲದಹಳ್ಳಿ ದೂರಿನಲ್ಲಿ ಒತ್ತಾಯಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.