ಬಳ್ಳಾರಿ: ‘ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಮಾರ್ಚ್ 21 ಮತ್ತು 22ರಂದು ರಾಮನಗರದಿಂದ ಬೆಂಗಳೂರಿನ ವಿಧಾನ ಸೌಧದವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ’ ಎಂದು ಕರ್ನಾಟಕ ರಕ್ಷಣಾ ವೇದಿಕೆ ( ಪ್ರವೀಣ್ ಶೆಟ್ಟಿ ಬಣ) ಜಿಲ್ಲಾಧ್ಯಕ್ಷ ವಿ.ಎಚ್.ಹುಲುಗಪ್ಪ ಹೇಳಿದರು.
ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು 2023ರ ವಿಧಾನಸಭೆ ಚುನಾವಣೆಯ ವೇಳೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಮೇಕೆದಾಟು ಯೋಜನೆ ಜಾರಿಗೊಳಿಸುವುದಾಗಿ ಹೇಳಿದ್ದರು. ಆದರೆ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷಗಳು ಕಳೆದರೂ ಮೇಕೆದಾಟು ಯೋಜನೆ ಜಾರಿಗೆ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಆರೋಪಿಸಿದರು.
‘ಬೆಂಗಳೂರು ನಗರ, ರಾಮನಗರ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ದೇವನಹಳ್ಳಿ ಸೇರಿದಂತೆ ನಾನಾ ಪ್ರದೇಶಗಳಲ್ಲಿ ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುತ್ತದೆ. ಆದರೂ ಬಜೆಟ್‌ನಲ್ಲಿಯೂ ಸಹ ಮೇಕೆದಾಟು ಯೋಜನೆಗೆ ಯಾವುದೇ ಅನುದಾನ ಮೀಸಲಿಟ್ಟಿಲ್ಲ’ ಎಂದರು.
ಕರ್ನಾಟಕ ರಕ್ಷಣಾ ವೇದಿಕೆ ( ಪ್ರವೀಣ್ ಶೆಟ್ಟಿ ಬಣ) ರಾಜ್ಯ ಸಂಚಾಲಕ ಅದ್ದಿಗೇರ್ ರಾಮಣ್ಣ, ಮುಖಂಡರಾದ ಶಿವಣ್ಣ, ವೆಂಕಟೇಶ, ಚಂದ್ರಣ್ಣ, ಪದಾಧಿಕಾರಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.