ADVERTISEMENT

ಬಳ್ಳಾರಿ: ಜನೌಷಧ ಕೇಂದ್ರ ಮುಚ್ಚದಿರಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 26 ಮೇ 2025, 14:56 IST
Last Updated 26 ಮೇ 2025, 14:56 IST
ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನೌಷಧ ಕೇಂದ್ರಗಳನ್ನು ಮುಚ್ಚದಂತೆ ಆಗ್ರಹಿಸಿ ಕನ್ನಡನಾಡು ರೈತ ಸಂಘದಿಂದ ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಯಿತು
ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನೌಷಧ ಕೇಂದ್ರಗಳನ್ನು ಮುಚ್ಚದಂತೆ ಆಗ್ರಹಿಸಿ ಕನ್ನಡನಾಡು ರೈತ ಸಂಘದಿಂದ ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಯಿತು   

ಬಳ್ಳಾರಿ: ಜನೌಷಧ ಕೇಂದ್ರಗಳನ್ನು ಮುಚ್ಚದಂತೆ ಒತ್ತಾಯಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕನ್ನಡನಾಡು ರೈತ ಸಂಘದಿಂದ ಸೋಮವಾರ ಪ್ರತಿಭಟನೆ ನಡೆಯಿತು.

ಸಂಘದ ಅಧ್ಯಕ್ಷ ಈಶ್ವರಪ್ಪ ಮೆಣಸಿನ ಮಾತನಾಡಿ, ‘ರಾಜ್ಯದ 182 ಜನೌಷಧ ಕೇಂದ್ರಗಳನ್ನು ಮುಚ್ಚುವುದು ಜನ ವಿರೋಧಿ ನೀತಿ. ಬಡ ರೈತರು, ಕೂಲಿ ಕಾರ್ಮಿಕರು ಮಧ್ಯಮ ವರ್ಗದ ರೋಗಿಗಳಿಗೆ ಬಹಳ ಕಡಿಮೆ ಧರಗಳಲ್ಲಿ ಔಷಧ ದೊರೆಯುತ್ತದೆ. ಯಾವುದೇ ಕಾರಣಕ್ಕೆ ಜನೌಷಧ ಕೇಂದ್ರಗಳನ್ನು ತೆಗೆಯಬಾರದು’ ಎಂದು ಒತ್ತಾಯಿಸಿದರು.

ಸಂಘದ ಪದಾಕಾರಿಗಳಾದ ಬಿ.ಕೆ.ಶಿವಪ್ಪ, ಗಂಗಾಧರ್, ರಾಜಶೇಖರ್, ಮಂಜುನಾಥ್, ಶಿವರಾಜು, ಎರ‍್ರಿಸ್ವಾಮಿ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.