ADVERTISEMENT

ಶ್ರೀರಾಮುಲುಗೆ ಉಪಮುಖ್ಯಮಂತ್ರಿ ಸ್ಥಾನಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 27 ಆಗಸ್ಟ್ 2019, 14:36 IST
Last Updated 27 ಆಗಸ್ಟ್ 2019, 14:36 IST
ಶ್ರೀರಾಮುಲು ಅವರ ಬೆಂಬಲಿಗರು ಮಂಗಳವಾರ ಹೊಸಪೇಟೆಯ ರೋಟರಿ ವೃತ್ತದಲ್ಲಿ ಟೈರ್‌ ಸುಟ್ಟು ಆಕ್ರೋಶ ಹೊರಹಾಕಿದರು
ಶ್ರೀರಾಮುಲು ಅವರ ಬೆಂಬಲಿಗರು ಮಂಗಳವಾರ ಹೊಸಪೇಟೆಯ ರೋಟರಿ ವೃತ್ತದಲ್ಲಿ ಟೈರ್‌ ಸುಟ್ಟು ಆಕ್ರೋಶ ಹೊರಹಾಕಿದರು   

ಹೊಸಪೇಟೆ: ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಆಗ್ರಹಿಸಿ ಅವರ ಬೆಂಬಲಿಗರು ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಪ್ರಮುಖ ರಸ್ತೆಗಳಲ್ಲಿ ರ್‍ಯಾಲಿ ನಡೆಸಿದ ಪ್ರತಿಭಟನಾಕಾರರು, ಬಳಿಕ ರೋಟರಿ ವೃತ್ತದಲ್ಲಿ ಸೇರಿ ಟೈರ್‌ ಸುಟ್ಟು ಆಕ್ರೋಶ ಹೊರಹಾಕಿದರು.

ಶ್ರೀರಾಮುಲು ಅವರ ಭಾವಚಿತ್ರಗಳನ್ನು ಹಿಡಿದುಕೊಂಡು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಅವರ ಬೆಂಬಲಿಗರು ಜಯಘೋಷ ಹಾಕಿದರು. ‘ಬಿಜೆಪಿ ಅಧಿಕಾರಕ್ಕೆ ಬಂದರೆ ರಾಮುಲು ಅವರನ್ನು ಉಪಮುಖ್ಯಮಂತ್ರಿ ಮಾಡಲಾಗುವುದು ಎಂದು ಆ ಪಕ್ಷದ ಮುಖಂಡರು ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಭರವಸೆ ನೀಡಿದ್ದರು. ಆದರೆ, ಈಗ ಮಾತಿನಂತೆ ನಡೆದುಕೊಳ್ಳುತ್ತಿಲ್ಲ. ಇದು ರಾಮುಲು ಅವರಿಗೆ ಮಾಡಿರುವ ಅವಮಾನ ಅಲ್ಲ. ಇಡೀ ಉತ್ತರ ಕರ್ನಾಟಕಕ್ಕೆ ಮಾಡಿರುವ ಅಪಮಾನ’ ಎಂದು ಆರೋಪಿಸಿದರು.

ADVERTISEMENT

‘ರಾಮುಲು ಅವರು ಉತ್ತರ ಕರ್ನಾಟಕದಲ್ಲಿ ಅವರದೇ ಆದ ವರ್ಚಸ್ಸು ಹೊಂದಿದ್ದಾರೆ. ಅವರನ್ನು ಈ ರೀತಿ ಕಡೆಗಣಿಸಿರುವುದು ಸರಿಯಲ್ಲ. ಆಗಿರುವ ತಪ್ಪು ಸರಿಪಡಿಸಿ ಅವರಿಗೆ ಉಪಮುಖ್ಯಮಂತ್ರಿ ಮಾಡಬೇಕು’ ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.