ADVERTISEMENT

ಹೊಸಪೇಟೆ: ವಿದ್ಯಾರ್ಥಿ ವೇತನ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 28 ಆಗಸ್ಟ್ 2019, 9:30 IST
Last Updated 28 ಆಗಸ್ಟ್ 2019, 9:30 IST
‘ಕ್ಯಾಂಪಸ್‌ ಫ್ರಂಟ್‌ ಆಫ್‌ ಇಂಡಿಯಾ’ ಕಾರ್ಯಕರ್ತರು ಬುಧವಾರ ಹೊಸಪೇಟೆಯ ರೋಟರಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು–ಪ್ರಜಾವಾಣಿ ಚಿತ್ರ
‘ಕ್ಯಾಂಪಸ್‌ ಫ್ರಂಟ್‌ ಆಫ್‌ ಇಂಡಿಯಾ’ ಕಾರ್ಯಕರ್ತರು ಬುಧವಾರ ಹೊಸಪೇಟೆಯ ರೋಟರಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು–ಪ್ರಜಾವಾಣಿ ಚಿತ್ರ   

ಹೊಸಪೇಟೆ: ವಿದ್ಯಾರ್ಥಿ ವೇತನ ಬಿಡುಗಡೆಗೆ ವಿಳಂಬ ಮಾಡುತ್ತಿರುವುದನ್ನು ವಿರೋಧಿಸಿ ‘ಕ್ಯಾಂಪಸ್‌ ಫ್ರಂಟ್‌ ಆಫ್‌ ಇಂಡಿಯಾ’ ಕಾರ್ಯಕರ್ತರು ಬುಧವಾರ ನಗರದ ರೋಟರಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ನಂತರ ತಹಶೀಲ್ದಾರ್‌ ಎಚ್‌. ವಿಶ್ವನಾಥ್‌ ಅವರಿಗೆ ಮನವಿ ಪತ್ರ ಸಲ್ಲಿಸಿದರು. ‘2017–18, 2018–19ನೇ ಸಾಲಿನ ಮೆಟ್ರಿಕ್‌ ಪೂರ್ವ ಹಾಗೂ ಮೆಟ್ರಿಕ್‌ ನಂತರದವರು, ಪದವಿ ಮತ್ತು ಸ್ನಾತಕೋತ್ತರ ಕೋರ್ಸ್‌ಗಳಲ್ಲಿ ಓದುತ್ತಿರುವವರಿಗೆ ವಿದ್ಯಾಸಿರಿ ಯೋಜನೆಯಡಿ ಇದುವರೆಗೆ ವಿದ್ಯಾರ್ಥಿ ವೇತನ ಕೊಟ್ಟಿಲ್ಲ. ಇದರಿಂದಾಗಿ ನೂರಾರು ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ’ ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

‘ವಿದ್ಯಾರ್ಥಿ ವೇತನದಿಂದ ಶಾಲಾ,ಕಾಲೇಜಿನ ಶುಲ್ಕ ಭರಿಸಿ, ಅಗತ್ಯ ಪಠ್ಯಪುಸ್ತಕಗಳನ್ನು ವಿದ್ಯಾರ್ಥಿಗಳು ಖರೀದಿಸುತ್ತಾರೆ. ಅದರಲ್ಲೂ ಗ್ರಾಮೀಣ ಪ್ರದೇಶದ ಬಡ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನವನ್ನೇ ಅವಲಂಬಿಸಿ ವ್ಯಾಸಂಗ ಮಾಡುತ್ತಾರೆ. ಆದರೆ, ಎರಡು ವರ್ಷಗಳಿಂದ ವಿದ್ಯಾರ್ಥಿ ವೇತನ ಪಾವತಿಯಾಗದ ಕಾರಣ ಅವರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಅವರ ಓದಿಗೆ ಹಿನ್ನಡೆಯಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸಿ, ಆದಷ್ಟು ಶೀಘ್ರ ಪಾವತಿಸಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಕೆ ನೀಡಿದ್ದಾರೆ.

ADVERTISEMENT

ಸಂಘಟನೆಯ ಜಿಲ್ಲಾ ಅಧ್ಯಕ್ಷ ಮೊಹಮ್ಮದ್‌ ಗೌಸ್‌ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ವಿವಿಧ ಶಾಲಾ, ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.