ADVERTISEMENT

ಕುಡಿಯುವ ನೀರಿಗೆ ಗರಗ ಗ್ರಾಮಸ್ಥರಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2018, 12:13 IST
Last Updated 17 ಡಿಸೆಂಬರ್ 2018, 12:13 IST
ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಆಗ್ರಹಿಸಿ ಹೊಸಪೇಟೆ ತಾಲ್ಲೂಕಿನ ಗರಗ ಗ್ರಾಮಸ್ಥರು ಸೋಮವಾರ ತಾಲ್ಲೂಕು ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು
ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಆಗ್ರಹಿಸಿ ಹೊಸಪೇಟೆ ತಾಲ್ಲೂಕಿನ ಗರಗ ಗ್ರಾಮಸ್ಥರು ಸೋಮವಾರ ತಾಲ್ಲೂಕು ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು   

ಹೊಸಪೇಟೆ: ತಾಲ್ಲೂಕಿನ ಜಿ. ನಾಗಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗರಗ ಗ್ರಾಮದಲ್ಲಿನ ಕುಡಿಯುವ ನೀರಿನ ಸಮಸ್ಯೆ ನೀಗಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ನೇತೃತ್ವದಲ್ಲಿ ಗ್ರಾಮಸ್ಥರು ಸೋಮವಾರ ಇಲ್ಲಿನ ತಾಲ್ಲೂಕು ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ನಂತರ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಟಿ. ವೆಂಕೋಬಪ್ಪ ಅವರಿಗೆ ಮನವಿ ಪತ್ರ ಸಲ್ಲಿಸಿದರು.

‘ಗ್ರಾಮದಲ್ಲಿ ಪದೇ ಪದೇ ಕುಡಿಯುವ ನೀರಿಗೆ ಸಮಸ್ಯೆ ಉಂಟಾಗುತ್ತಿದೆ. ಇದರಿಂದ ಗ್ರಾಮಸ್ಥರು ಪರದಾಟ ನಡೆಸುತ್ತಿದ್ದಾರೆ. ಈ ಸಮಸ್ಯೆಯನ್ನು ಶಾಶ್ವತವಾಗಿ ಬಗೆಹರಿಸಬೇಕೆಂದು ಅನೇಕ ಸಲ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ವಾರದ ಒಳಗೆ ಸಮಸ್ಯೆ ಬಗೆಹರಿಸದಿದ್ದಲ್ಲಿ ಉಗ್ರ ಸ್ವರೂಪದ ಹೋರಾಟ ನಡೆಸಲಾಗುವುದು’ ಎಂದು ಮನವಿಯಲ್ಲಿ ಎಚ್ಚರಿಕೆ ನೀಡಿದ್ದಾರೆ.

ADVERTISEMENT

ವೇದಿಕೆ ಗ್ರಾಮ ಘಟಕದ ಅಧ್ಯಕ್ಷ ಜಿ. ಮಾರೇಶ್‌ ಯಾದವ್‌, ಗ್ರಾಮಸ್ಥರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.