ADVERTISEMENT

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 2 ಮೇ 2019, 13:57 IST
Last Updated 2 ಮೇ 2019, 13:57 IST
ಗ್ರಾಮಸ್ಥರು ಜೆ.ಡಿ.ಎಸ್‌. ಮುಖಂಡ ದೀಪಕ್‌ ಕುಮಾರ್‌ ಸಿಂಗ್‌ ನೇತೃತ್ವದಲ್ಲಿ ನಗರಸಭೆ ಪೌರಾಯುಕ್ತ ವಿ. ರಮೇಶ್‌ ಅವರಿಗೆ ಮನವಿ ಪತ್ರ ಸಲ್ಲಿಸಿದರು
ಗ್ರಾಮಸ್ಥರು ಜೆ.ಡಿ.ಎಸ್‌. ಮುಖಂಡ ದೀಪಕ್‌ ಕುಮಾರ್‌ ಸಿಂಗ್‌ ನೇತೃತ್ವದಲ್ಲಿ ನಗರಸಭೆ ಪೌರಾಯುಕ್ತ ವಿ. ರಮೇಶ್‌ ಅವರಿಗೆ ಮನವಿ ಪತ್ರ ಸಲ್ಲಿಸಿದರು   

ಹೊಸಪೇಟೆ: ನಗರ ಹಾಗೂ ತಾಲ್ಲೂಕಿನ ಕೆಲವು ಗ್ರಾಮಗಳಲ್ಲಿ ತಲೆದೋರಿರುವ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬೇಕು’ ಎಂದು ಜೆ.ಡಿ.ಎಸ್‌. ಮುಖಂಡ ದೀಪಕ್‌ ಕುಮಾರ್‌ ಸಿಂಗ್‌ ಆಗ್ರಹಿಸಿದ್ದಾರೆ.

ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಭಾಗದ ಜನರೊಂದಿಗೆ ಅವರು ಗುರುವಾರ ನಗರಸಭೆ ಪೌರಾಯುಕ್ತರು ಹಾಗೂ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಯನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು.

‘ನಗರಸಭೆ ವ್ಯಾಪ್ತಿಯ 35 ವಾರ್ಡ್‌ಗಳು, ತಾಲ್ಲೂಕಿನ ಹಂಪಿ, ಪಾಪಿನಾಯಕನಹಳ್ಳಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಹತ್ತು ಗ್ರಾಮ ಪಂಚಾಯಿತಿಗಳ ಗ್ರಾಮಗಳಲ್ಲಿ ತೀವ್ರ ಕುಡಿಯುವ ನೀರಿನ ಸಮಸ್ಯೆ ಇದೆ. ಟ್ಯಾಂಕರ್‌ ಮೂಲಕ ನೀರು ಪೂರೈಸುತ್ತಿದ್ದರೂ ಸರಿ ಹೊಂದುತ್ತಿಲ್ಲ. ಜನ ನೀರಿಗಾಗಿ ತೀವ್ರ ಪರದಾಟ ನಡೆಸಬೇಕಾಗಿದೆ. ದೈನಂದಿನ ಕೆಲಸ ಬಿಟ್ಟು ನೀರಿಗಾಗಿ ಅಲೆದಾಡುತ್ತಿದ್ದಾರೆ. ಅಧಿಕಾರಿಗಳು ಮುತುವರ್ಜಿ ವಹಿಸಿ ಸಮಸ್ಯೆ ಬಗೆಹರಿಸಬೇಕು’ ಎಂದು ದೀಪಕ್‌ ಕುಮಾರ್‌ ಸಿಂಗ್‌ ಒತ್ತಾಯಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.