ADVERTISEMENT

‘ಶೀಘ್ರ ಪ್ರಯಾಣಿಕರ ರೈಲು ಓಡಿಸಿ’

​ಪ್ರಜಾವಾಣಿ ವಾರ್ತೆ
Published 8 ಜುಲೈ 2019, 13:01 IST
Last Updated 8 ಜುಲೈ 2019, 13:01 IST
ವಿಜಯನಗರ ರೈಲ್ವೆ ಅಭಿವೃದ್ಧಿ ಕ್ರಿಯಾ ಸಮಿತಿಯ ಪದಾಧಿಕಾರಿಗಳು ಸಂಸದ ವೈ. ದೇವೇಂದ್ರಪ್ಪನವರಿಗೆ ಮನವಿ ಪತ್ರ ಸಲ್ಲಿಸಿದರು
ವಿಜಯನಗರ ರೈಲ್ವೆ ಅಭಿವೃದ್ಧಿ ಕ್ರಿಯಾ ಸಮಿತಿಯ ಪದಾಧಿಕಾರಿಗಳು ಸಂಸದ ವೈ. ದೇವೇಂದ್ರಪ್ಪನವರಿಗೆ ಮನವಿ ಪತ್ರ ಸಲ್ಲಿಸಿದರು   

ಹೊಸಪೇಟೆ: ‘ಶೀಘ್ರದಲ್ಲಿ ನಗರದಿಂದ ಕೊಟ್ಟೂರು ವರೆಗೆ ಪ್ರಯಾಣಿಕರ ರೈಲು ಓಡಿಸಬೇಕು’ ಎಂದು ವಿಜಯನಗರ ರೈಲ್ವೆ ಅಭಿವೃದ್ಧಿ ಕ್ರಿಯಾ ಸಮಿತಿ ಆಗ್ರಹಿಸಿದೆ.

ಈ ಸಂಬಂಧ ಸಮಿತಿಯ ಪದಾಧಿಕಾರಿಗಳು ಸಂಸದ ವೈ. ದೇವೇಂದ್ರಪ್ಪನವರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.

‘ಬರುವ ಆಗಸ್ಟ್‌ 31ರ ಒಳಗಾಗಿ ಪ್ರಯಾಣಿಕರ ರೈಲು ಆರಂಭಿಸಲು ನೈರುತ್ಯ ರೈಲ್ವೆ ವಲಯದ ಪ್ರಧಾನ ವ್ಯವಸ್ಥಾಪಕರು ವಿವಿಧ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಆದರೆ, ಅದಕ್ಕೆ ಪೂರಕವಾಗಿ ಕಾಮಗಾರಿಗಳು ನಡೆಯುತ್ತಿಲ್ಲ. ಎಲ್ಲ ಕಾಮಗಾರಿಗಳು ನಿಗದಿತ ಅವಧಿಯೊಳಗೆ ಮುಗಿಸಲು ಸೂಚನೆ ಕೊಡಬೇಕು’ ಎಂದು ಆಗ್ರಹಿಸಿದರು.

ADVERTISEMENT

‘ಈ ಭಾಗದಲ್ಲಿ ಪ್ರಯಾಣಿಕರ ರೈಲು ಆರಂಭವಾದರೆ ನೂರಾರು ಜನರಿಗೆ ಅನುಕೂಲವಾಗುತ್ತದೆ. ಮಂಗಳೂರು, ಬೆಂಗಳೂರು ಸೇರಿದಂತೆ ಅನೇಕ ಊರುಗಳಿಗೆ ನೇರ ಸಂಪರ್ಕ ಕಲ್ಪಿಸಿದಂತಾಗುತ್ತದೆ. ಪ್ರಯಾಣದ ಅವಧಿ, ವೆಚ್ಚ ಕಡಿಮೆಯಾಗುತ್ತದೆ’ ಎಂದು ತಿಳಿಸಿದ್ದಾರೆ.

ನೈರುತ್ಯ ವಲಯ ರೈಲ್ವೆ ಬಳಕೆದಾರರ ಸಲಹಾ ಸಮಿತಿ ಸದಸ್ಯ ಬಾಬುಲಾಲ್‌ ಜೈನ್‌, ಸಮಿತಿಯ ಅಧ್ಯಕ್ಷ ವೈ. ಯಮುನೇಶ, ಪ್ರಮುಖರಾದಶ್ಯಾಮಪ್ಪ ಅಗೋಲಿ, ಕೆ.ಮಹೇಶ, ದೀಪಕ್ ಉಳ್ಳಿ, ರಾಮಕೃಷ್ಣ, ದೇವರೆಡ್ಡಿ, ಪೀರಾನ್ ಸಾಬ್, ದೇವದಾಸ್, ವಿಶ್ವನಾಥ್ ಕೌತಾಳ್, ಚಂದ್ರಕಾಂತ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.