ADVERTISEMENT

ಕಳಪೆ ಬೀಜ ಮಾರಿದ ಕಂಪನಿ ವಿರುದ್ಧ ಕ್ರಮಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 30 ನವೆಂಬರ್ 2020, 9:42 IST
Last Updated 30 ನವೆಂಬರ್ 2020, 9:42 IST
ಹೊಸಪೇಟೆಯಲ್ಲಿ ಸೋಮವಾರ ರೈತರು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಮನವಿ ಪತ್ರ ಸಲ್ಲಿಸಿದರು
ಹೊಸಪೇಟೆಯಲ್ಲಿ ಸೋಮವಾರ ರೈತರು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಮನವಿ ಪತ್ರ ಸಲ್ಲಿಸಿದರು   

ಹೊಸಪೇಟೆ: ಕಳಪೆ ಮೆಣಸಿನಕಾಯಿ ಬೀಜ ಮಾರಾಟ ಮಾಡಿ ರೈತರಿಗೆ ವಂಚಿಸಿರುವ ಕಂಪನಿ ವಿರುದ್ಧ ಕ್ರಮ ಜರುಗಿಸಬೇಕೆಂದು ರೈತರು ಆಗ್ರಹಿಸಿದ್ದಾರೆ.

ರೈತರು ಈ ಸಂಬಂಧ ಸೋಮವಾರ ಇಲ್ಲಿನ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಕಳಪೆ ಬೀಜದಿಂದ ಮೆಣಸಿನಕಾಯಿ ಇಳುವರಿ ಬಂದಿಲ್ಲ. ನೂರಾರು ಎಕರೆಯಲ್ಲಿ ಬೆಳೆ ಬೆಳೆದಿದ್ದ ರೈತರು ನಷ್ಟಕ್ಕೆ ಒಳಗಾಗಿದ್ದಾರೆ. ತಾಲ್ಲೂಕಿನ ಬೈಲುವದ್ದಿಗೇರಿ, ಕಾಕುಬಾಳು, ಜೋಗ ಸೇರಿದಂತೆ ಹಲವು ರೈತರು ಕಂಪನಿಯ ಮೋಸಕ್ಕೆ ಒಳಗಾಗಿ ಕೈ ಸುಟ್ಟುಕೊಂಡಿದ್ದಾರೆ. ಬೀಜ ಮಾರಾಟ ಮಾಡಿದ ಕಂಪನಿ ವಿರುದ್ಧ ಶೀಘ್ರ ಕಾನೂನು ಕ್ರಮ ಜರುಗಿಸಬೇಕು. ಅಲ್ಲದೇ ರೈತರಿಗೆ ಪ್ರತಿ ಎಕರೆಗೆ ₹50,000 ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ADVERTISEMENT

ಮುಖಂಡರಾದ ಮರಡಿ ಜಂಬಯ್ಯ ನಾಯಕ, ಆರ್‌. ಭಾಸ್ಕರ್‌ ರೆಡ್ಡಿ, ಜೆ.ಎಂ. ಚನ್ನಬಸವಯ್ಯ, ಎಸ್‌. ಶರಭಣ್ಣ ಜೋಗ, ಅಮ್ರಾಪುರ ವೀರೇಶ, ವೀರನಗೌಡ ರುದ್ರಗೌಡ, ಕಾಗೇರು ಚನ್ನವೀರಪ್ಪ, ಅಯ್ಯನಗೌಡ, ವೀರಭದ್ರಗೌಡ, ಪೂಜೆರು ಮಾರಪ್ಪ, ಎನ್‌. ಪ್ರಕಾಶ್‌, ಎಚ್‌. ಗವಿಸಿದ್ದಪ್ಪ ಮನವಿಗೆ ಸಹಿ ಹಾಕಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.