ADVERTISEMENT

ದಯಾನಂದ ಅಮಾನತು ಹಿಂಪಡೆಯುವಂತೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 17 ಜೂನ್ 2025, 14:27 IST
Last Updated 17 ಜೂನ್ 2025, 14:27 IST
ಬಿ.ಎಂ.ಸತೀಶ್
ಬಿ.ಎಂ.ಸತೀಶ್   

ಸಿರುಗುಪ್ಪ: ಬೆಂಗಳೂರಿನ ಪೊಲೀಸ್ ಆಯುಕ್ತರಾಗಿದ್ದ ಬಿ.ದಯಾನಂದ ಅವರ ಅಮಾನತು ಹಿಂಪಡೆದು ತಕ್ಷಣ ಹುದ್ದೆಗೆ ಮರು ನೇಮಕ ಮಾಡಬೇಕು ಎಂದು ವಾಲ್ಮೀಕಿ ವಿದ್ಯಾಭಿವೃದ್ದಿ ಸಂಘದ ಅಧ್ಯಕ್ಷ ಬಿ.ಎಂ.ಸತೀಶ್ ಹೇಳಿದರು.

ನಗರದ ವಾಲ್ಮೀಕಿ ವಿದ್ಯಾಭಿವೃದ್ದಿ ಸಂಘದ ಕಚೇರಿಯಲ್ಲಿ ಮಂಗಳವಾರ ಸುದ್ದಿಗೊಷ್ಠಿಯಲ್ಲಿ ಮಾತನಾಡಿದರು.

ಆರ್‌ಸಿಬಿ ವಿಜಯೋತ್ಸವ ವೇಳೆ ನಡೆದ ಅವಘಡಕ್ಕೆ ದಯಾನಂದ ಅವರನ್ನು ಹೊಣೆ ಮಾಡಿ ಅಮಾನತು ಮಾಡಿರುವುದು ಖಂಡನೀಯ. ಅಮಾನತು ತಕ್ಷಣ ಹಿಂಪಡೆದು, ಬೆಂಗಳೂರಿನ ಪೊಲೀಸ್ ಆಯುಕ್ತರನ್ನಾಗಿ ಕರ್ತವ್ಯಕ್ಕೆ ನೇಮಿಕೊಳ್ಳಬೇಕು ಎಂದು ಒತ್ತಾಯಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.