ಹರಪನಹಳ್ಳಿ: ‘ಗ್ರಾಮ ಪಂಚಾಯಿತಿ ಸುಪರ್ದಿಯಲ್ಲಿರುವ 6.26 ಎಕರೆ ಖಾಲಿ ಜಾಗವನ್ನು ಜಿಲ್ಲಾಧಿಕಾರಿಗೆ ವಹಿಸಿದರೆ ಅಭಿವೃದ್ಧಿಗೊಳಿಸಿ ನಿರ್ವಹಣೆಗೆ ಪುನಃ ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್ ಹೇಳಿದರು.
ತಾಲ್ಲೂಕಿನ ಉಚ್ಚಂಗಿದುರ್ಗ ಮತ್ತು ಹಾಲಮ್ಮ ತೋಪಿಗೆ ಭೇಟಿ ನೀಡಿ ಮೂಲ ಸೌಕರ್ಯಗಳನ್ನು ಪರಿಶೀಲಿಸಿದ ಬಳಿಕ ಅವರು ದೇವಸ್ಥಾನ ಸಮಿತಿ, ಗ್ರಾಮ ಪಂಚಾಯಿತಿ ಜನಪ್ರತಿನಿಧಿಗಳೊಂದಿಗೆ ಮಾತನಾಡಿದರು. ಉಚ್ಚಂಗಿದುರ್ಗ ಐತಿಹಾಸಿಕ ಸ್ಥಳ, ಇಲ್ಲಿಗೆ ಲಕ್ಷಾಂತರ ಭಕ್ತರು ಬರುತ್ತಾರೆ. ಅವರೆಲ್ಲರಿಗೂ ಮೂಲ ಸವಲತ್ತು ಕಲ್ಪಿಸಲು ಜಾಗದ ಕೊರತೆಯಿದೆ. ಗ್ರಾಮ ಪಂಚಾಯಿತಿ ಅವರ ಹೆಸರಿನಲ್ಲಿರುವ ಜಾಗವನ್ನು ಬಿಟ್ಟುಕೊಟ್ಟರೆ, ಅಲ್ಲಿ ಶೌಚಾಲಯ, ವಸತಿ, ಕುಡಿಯುವ ನೀರು, ವಿದ್ಯುತ್ ದೀಪದ ವ್ಯವಸ್ಥೆ ಕಲ್ಪಿಸಬೇಕಿದೆ. ಸುಸಜ್ಜಿತವಾಗಿ ನಿರ್ಮಾಣ ಮಾಡಿ ಕೊಡಲಾಗುವುದು ಎಂದು ಭರವಸೆ ನೀಡಿದರು.
‘ಧರ್ಮಾದಾಯ, ಧಾರ್ಮಿಕ ದತ್ತಿ ಇಲಾಖೆಯ ಕಾರ್ಯನಿರ್ವಾಹಕ ಅಧಿಕಾರಿ ಕೆ. ಮಲ್ಲಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗಂಗಮ್ಮ ರಮೇಶ್, ಉಪಾಧ್ಯಕ್ಷ ಮಡ್ರಳ್ಳಿ ಕೆಂಚಪ್ಪ, ಮುಖಂಡರಾದ ಶಿವಕುಮಾರ ಸ್ವಾಮಿ, ಉಮೇಶ್ ನಾಯ್ಕ, ಪಿ. ಮಂಜಪ್ಪ, ರೇವಣಸಿದ್ದಪ್ಪ, ಮರುಳಸಿದ್ದಪ್ಪ, ಕೆಂಚಪ್ಪ, ಪಿಡಿಒ ಪರಮೇಶ್ವರಪ್ಪ, ನಾನ್ಯ ಸಾಹೇಬ್, ಸಂತೋಷ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.