ADVERTISEMENT

ಬಳ್ಳಾರಿ | ಬಿಜೆಪಿಯಿಂದ ಧರ್ಮಸ್ಥಳ ಚಲೋ ಸೆ.1ಕ್ಕೆ: ಶ್ರೀರಾಮುಲು

​ಪ್ರಜಾವಾಣಿ ವಾರ್ತೆ
Published 31 ಆಗಸ್ಟ್ 2025, 5:17 IST
Last Updated 31 ಆಗಸ್ಟ್ 2025, 5:17 IST
ಶ್ರೀರಾಮುಲು
ಶ್ರೀರಾಮುಲು   

ಬಳ್ಳಾರಿ: ‘ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ ಎಂದು ಆರೋಪಿಸಿರುವ ಮಾಜಿ ಸಚಿವ ಬಿ. ಶ್ರೀರಾಮುಲು, ಅಲ್ಲಿನ ಘಟನೆಗಳ ಸಂಪೂರ್ಣ ತನಿಖೆಯನ್ನು ರಾಷ್ಟ್ರೀಯ ತನಿಖಾ ತಂಡಕ್ಕೆ ವಹಿಸಬೇಕು ಎಂದು ಆಗ್ರಹಿಸಿ ಸೆ. 1ರಂದು ಬಿಜೆಪಿಯಿಂದ ಧರ್ಮಸ್ಥಳ ಚಲೋ ಹಮ್ಮಿಕೊಳ್ಳಲಾಗಿದೆ’ ಎಂದು ಹೇಳಿದ್ದಾರೆ. 

ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಶನಿವಾರ ವಿಡಿಯೊ ಬಿಡುಗಡೆ ಮಾಡಿರುವ ಅವರು, ‘ಶತಕೋಟಿ ಹಿಂದೂಗಳ ಶ್ರದ್ಧಾ ಹಾಗೂ ನಂಬಿಕೆಯ ಧಾರ್ಮಿಕ ಕೇಂದ್ರವಾದ ಧರ್ಮಸ್ಥಳದ ವಿರುದ್ಧ ಕೆಲವು ದುಷ್ಟ ಶಕ್ತಿಗಳು ಷಡ್ಯಂತ್ರ ನಡೆಸುತ್ತಿವೆ. ಇದರ ವಿರುದ್ಧ ಒಗ್ಗಟ್ಟಿನ ಹೋರಾಟವೇ ಧರ್ಮಸ್ಥಳ ಚಲೋ ಸಮಾವೇಶ’ ಎಂದು ಹೇಳಿದ್ದಾರೆ. 

‘ಷಡ್ಯಂತ್ರವನ್ನು ಎನ್‌ಐಎಗೆ ವಹಿಸುವಂತೆ ಒತ್ತಾಯಿಸಿ ಪಕ್ಷದ ವತಿಯಿಂದ ಧರ್ಮಸ್ಥಳ ಚಲೋ ಅಭಿಯಾನವನ್ನು ಸೆಪ್ಟೆಂಬರ್ 1ರಂದು ಹಮ್ಮಿಕೊಳ್ಳಲಾಗಿದೆ’ ಎಂದು ಅವರು ತಿಳಿಸಿದರು.  

ADVERTISEMENT

‘ಸೆ. 1ರಂದು ಮಧ್ಯಾಹ್ನ ನಡೆಯಲಿರುವ ಈ ಅಭಿಯಾನದಲ್ಲಿ ಲಕ್ಷಾಂತರ ಸ್ವಾಭಿಮಾನಿ ಹಿಂದೂಗಳು ಭಾಗವಹಿಸಲಿದ್ದಾರೆ’ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.