ಕೂಡ್ಲಿಗಿ: ‘ತಾಲ್ಲೂಕಿನ ಅಪ್ಪೇನಹಳ್ಳಿ ಹಾಗೂ ಬಡೇಲಡಕು ಗ್ರಾಮ ಪಂಚಾಯ್ತಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ನಡೆಯಬೇಕಾಗಿದ್ದ ಚುನಾವಣೆಗೆ ಹೈಕೊರ್ಟ್ ಧಾರವಾಡ ಪೀಠ ತಡೆಯಾಜ್ಞೆ ನೀಡಿದೆ’ ಎಂದು ತಹಶೀಲ್ದಾರ್ ಟಿ. ಜಗದೀಶ್ ತಿಳಿಸಿದ್ದಾರೆ.
ಅಪ್ಪೇನಹಳ್ಳಿ ಗ್ರಾ.ಪಂ ಅಧ್ಯಕ್ಷ ಸ್ಥಾನ ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿದ್ದು, ಪರಿಶಿಷ್ಟ ಜಾತಿಗೆ ಮೀಸಲು ಮಾಡಬೇಕು ಎಂದು ಸದಸ್ಯ ಸೇವಾಲಾಲ್ ಎನ್ನುವವರು ಕೋರ್ಟ್ ಮೊರೆ ಹೋಗಿದ್ದರು. ಬಡೇಲಡಕು ಗ್ರಾ.ಪಂ ಅಧ್ಯಕ್ಷ ಸ್ಥಾನ ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿದ್ದು, ಸಾಮಾನ್ಯ ವರ್ಗಕ್ಕೆ ಮೀಸಲು ಮಾಡಬೇಕು ಎಂದು ಸದಸ್ಯೆ ಈಡಿಗಾರ ಶಿಲ್ಪ ಅರ್ಜಿ ಸಲ್ಲಿಸಿದ್ದರು ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.