ADVERTISEMENT

ಹೊಸಪೇಟೆ | ರಾಷ್ಟ್ರೀಯ ಪಲ್ಸ್ ಪೋಲಿಯೊ ಜಾಗೃತಿ ಜಾಥಾ: ಪೋಸ್ಟರ್‌ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2025, 5:18 IST
Last Updated 21 ಡಿಸೆಂಬರ್ 2025, 5:18 IST
<div class="paragraphs"><p>ಹೊಸಪೇಟೆಯಲ್ಲಿ ಶನಿವಾರ ಪೋಲಿಯೊ ಜಾಗೃತಿ ಜಾಥಾಕ್ಕೆ ಚಾಲನೆ ನೀಡಲಾಯಿತು</p></div>

ಹೊಸಪೇಟೆಯಲ್ಲಿ ಶನಿವಾರ ಪೋಲಿಯೊ ಜಾಗೃತಿ ಜಾಥಾಕ್ಕೆ ಚಾಲನೆ ನೀಡಲಾಯಿತು

   

–ಪ್ರಜಾವಾಣಿ ಚಿತ್ರ

ಹೊಸಪೇಟೆ (ವಿಜಯನಗರ): ದೇಶ ವನ್ನು ಸಂಪೂರ್ಣ ಪೋಲಿಯೊ ಮುಕ್ತ ವನ್ನಾಗಿಸಲು ಸಾರ್ವಜನಿಕರು ಐದು ವರ್ಷದೊಳಗಿನ ಮಕ್ಕಳಿಗೆ ಹತ್ತಿರದ ಬೂತ್‌ಗಳಿಗೆ ತೆರಳಿ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು, ಅದರಿಂದ ಅಡ್ಡ ಪರಿಣಾಮ ಇಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿ ಕಾರಿ ಡಾ.ಎಲ್.ಆರ್.ಶಂಕರ್ ನಾಯ್ಕ ಹೇಳಿದರು.

ADVERTISEMENT

ಇಲ್ಲಿ ಶನಿವಾರ‌‌ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೋ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮಾರ್ಗದರ್ಶನದಲ್ಲಿ ಸಂಪೂರ್ಣ ಭಾರತ ಪೋಲಿಯೊ ಮುಕ್ತವಾಗಿದೆ, ಆದರೆ ನೆರೆಯ ದೇಶ ಪಾಕಿಸ್ತಾನದಲ್ಲಿ 30 ಹಾಗೂ ಅಫ್ಗಾನಿಸ್ತಾನದಲ್ಲಿ 9 ಪ್ರಕರಣ ಕಂಡು ಬಂದಿರುವ ಹಿನ್ನೆಲೆ ಯಾವುದೇ ರೀತಿಯ ನಿರ್ಲಕ್ಷ್ಯ ವಹಿಸದೇ ಪೋಲಿಯೊ ಲಸಿಕೆ ಹಾಕಿಸುವಲ್ಲಿ ವಿವಿಧ ಇಲಾಖೆಗಳ ಸಮನ್ವಯತೆ ಯೊಂದಿಗೆ ಈ ಬಾರಿ ಡಿ.21ರಿಂದ 24ರ ವರಗೆ ಹಮ್ಮಿಕೊಂಡಿರುವ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮದಲ್ಲಿ ಹೆಚ್ಚಿನ ಕಾಳಜಿ ವಹಿಸಿ ಕಡ್ಡಾಯವಾಗಿ ಲಸಿಕೆ ಹಾಕಿಸಲು ಉತ್ತೇಜನ ನೀಡಬೇಕಿದೆ’ ಎಂದು ಹೇಳಿದರು.‌

ಎಂಸಿಎಚ್‌ ಆಸ್ಪತ್ರೆ ಆವರಣದಿಂದ ಆರಂಭಗೊಂಡ ಪೋಲಿಯೊ ಜಾಗೃತಿ ಜಾಥಾ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಬಿ.ಆರ್.ಅಂಬೇಡ್ಕರ್ ತಲುಪಿ ಪುನಃ ಎಂಸಿಎಚ್ ಆಸ್ಪತ್ರೆಗೆ ಬಂತು. 

ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಜಂಬಯ್ಯ, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ಕೆ.ರಾಧಿಕಾ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಷಣ್ಮುಖ, ತಾಲ್ಲೂಕು ವೈದ್ಯಾಧಿಕಾರಿ ಡಾ.ವಿನೋದ್, ಸಿಡಿಪಿಒ ಸಿಂಧು ಅಂಗಡಿ, ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ರಘುನಾಥ ದೀಪಾಲಿ, ಮಕ್ಕಳ ತಜ್ಞೆ ಲಲಿತಾ ಜೈನ್ ಇತರರು ಇದ್ದರು.

ಜಾಗೃತಿ ಜಾಥಾ

ಕುರುಗೋಡು: ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದವತಿಯಿಂದ ಪಲ್ಸ್ ಪೊಲಿಯೋ ಜಾಗೃತಿ ಜಾಥಾ ಶನಿವಾರ ಜರುಗಿತು.

ಸಮುದಾಯ ಆರೋಗ್ಯ ಕೇಂದ್ರದಿಂದ ಆರಂಭಗೊಂಡ ಜಾಥಾ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಜನರಲ್ಲಿ ಜಾಗೃತಿ ಮೂಡಿಸಿತು.

ಜಾಥಾಕ್ಕೆ ಚಾಲನೆ ನೀಡಿದ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಮಂಜುನಾಥ ಜವಳಿ ಮಾತನಾಡಿ, ಡಿಸ್ಸೆಂಬರ್ 21 ರಿಂದ 24ರ ವರೆಗೆ ನಾಲ್ಕುದಿನಗಳ ಕಾಲ ಜರುಗುವ ಅಭಿಯಾನದಲ್ಲಿ 5 ವರ್ಷದ ಒಳಗಿನ ಎಲ್ಲ ಮಕ್ಕಳಿಗೆ ಕಡ್ಡಾಯವಾಗಿ ಪೊಲಿಯೋ ಹನಿ ಹಾಕಿಸಿ ಸಂಭವಿಸಬಹುದಾದ ಸಂಭವನೀಯ ಅಂಗವಿಕಲತೆಯಿಂದ ರಕ್ಷಿಸಿ ಎಂದು ಸಲಹೆ ನೀಡಿದರು. ವಿದ್ಯಾರ್ಥಿಗಳು, ಆರೋಗ್ಯ ಸಹಾಯಕರು, ಆಶಾ ಕಾರ್ಯಕರ್ತೆಯರು ಮತ್ತು ಸಿಬ್ಬಂದಿ ಜಾಥಾದಲ್ಲಿ ಭಾಗವಹಿಸಿದ್ದರು.

‘21,811 ಮಕ್ಕಳಿಗೆ ಲಸಿಕೆ ಹಾಕುವ ಗುರಿ’

ಕೂಡ್ಲಿಗಿ: ಪೋಲಿಯೊ ಲಸಿಕೆ ಬಗ್ಗೆ ಸಾಮಾಜಿಕ ಜಾಲ ತಾಣಗಳಲ್ಲಿ ತಪ್ಪು ಸಂದೇಶ  ಬರುತ್ತಿದ್ದು, ಇವುಗಳಿಗೆ ಕಿವಿಗೊಡದೆ ತಮ್ಮ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಬೇಕು ಎಂದು ಶಾಸಕ ಡಾ.ಶ್ರೀನಿವಾಸ್ ಎನ್.ಟಿ. ಹೇಳಿದರು.

ಪೋಲಿಯೊ ಲಸಿಕೆ ಅತ್ಯಂತ ಸುರಕ್ಷಿತವಾಗಿದ್ದು, ಯಾವುದೇ ಆತಂಕ ಬೇಡ. ಅದ್ದರಿಂದ 5 ವರ್ಷದೊಳಗಿನೆ ಎಲ್ಲಾ ಮಕ್ಕಳಿಗೂ ಎರಡು ಹನಿ ಲಸಿಕೆ ಹಾಕಿಸುವ ಮೂಲಕ ಪೋಲಿಯೊ ಮುಕ್ತ ಭಾರತವನ್ನಾಗಿ ಮುಂದುವರಿಸಲು ಎಲ್ಲರು ಸಹಕರಿಸಬೇಕು ಎಂದು ಕೋರಿದರು.

ತಾಲ್ಲೂಕು ವೈಧ್ಯಾಧಿಕಾರಿ ಡಾ.ಎಸ್.ಪಿ.ಪ್ರದೀಪ್ ಮಾತನಾಡಿ, ತಾಲ್ಲೂನಲ್ಲಿ ಒಟ್ಟು 204 ಬೂತ್ ಸ್ಥಾಪಿಸಿದ್ದು, ಮನೆ, ಮನೆ ಭೇಟಿಗಾಗಿ 120 ತಂಡ ರಚಿಸಲಾಗಿದೆ. ಇವರು 45,318 ಮನೆಗಳನ್ನು ಭೇಟಿ ಮಾಡಿ 21,811 ಮಕ್ಕಳಿಗೆ ಲಸಿಕೆ ಹಾಕಲಿದ್ದಾರೆ. 8 ಸಂಚಾರಿ ತಂಡಗಳು, 2 ಮೊಬೈಲ್ ತಂಡಗಳು ಕಾರ್ಯನಿರ್ವಹಿಸಲಿವೆ. ತಾಲ್ಲೂಕಿನ 9 ಅಪಾಯಕಾರಿ ವಲಸೆಗಾರರ ಪ್ರದೇಶಗಳು ಹಾಗೂ 29 ಶಾಶ್ವತವಾಗಿ ನೆಲಿಸಿದ ಅಪಾಯಕಾರಿ ಪ್ರದೇಶಗಳೆಂದು ಗುರುತಿಸಿದ್ದು, ಅಲ್ಲಿ ಲಸಿಕೆ ನೀಡಲು ಪೂರ್ವ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ನಂತರ ಪೋಲಿಯೊ ಪ್ರಚಾರದ ಪೋಸ್ಟರ್‌ಗಳನ್ನು ಬಿಡುಗಡೆ ಮಾಡಲಾಯಿತು. ತಹಶೀಲ್ದಾರ್ ವಿ.ಕೆ.ನೇತ್ರಾವತಿ, ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಎಇಇ ಮಲ್ಲಿಕಾರ್ಜುನ್, ಕ್ಷೇತ್ರ ಶಿಕ್ಷಣಾಧಿಕಾರಿ ಮೈಲೇಶ್ ಬೇವೂರು, ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಎಚ್. ದಾದಾಪೀರ್ ಪಾಲ್ಗೊಂಡಿದ್ದರು.

ಇದಕ್ಕೂ ಮೊದಲು ಬೆಳಿಗ್ಗೆಪ್ರಚಾರಕ್ಕಾಗಿ ವಿದ್ಯಾರ್ಥಿಗಳಿಂದ ಪಟ್ಟಣದಲ್ಲಿ ಜಾಗೃತಿ ಜಾಥಾ ನಡೆಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.