ADVERTISEMENT

‘ಜೆಡಿಎಸ್‌ನಲ್ಲಿ ಭಿನ್ನಾಭಿಪ್ರಾಯ ಇರುವುದು ನಿಜ’

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2019, 11:09 IST
Last Updated 13 ಸೆಪ್ಟೆಂಬರ್ 2019, 11:09 IST

ಬಳ್ಳಾರಿ: ‘ಜೆ.ಡಿ.ಎಸ್‌.ನಲ್ಲಿ ಭಿನ್ನಾಭಿಪ್ರಾಯ ಇರುವುದು ನಿಜ. ಆದರೆ, ಯಾವ ಶಾಸಕರು ಪಕ್ಷ ಬಿಟ್ಟು ಹೋಗುತ್ತಿಲ್ಲ. ಅದೆಲ್ಲ ಕಪೋಲಕಲ್ಪಿತ’ ಎಂದು ಜೆ.ಡಿ.ಎಸ್‌. ರಾಜ್ಯ ಘಟಕದ ಅಧ್ಯಕ್ಷ ಎಚ್‌.ಕೆ. ಕುಮಾರಸ್ವಾಮಿ ಹೇಳಿದರು.

ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪಕ್ಷದ ನಾಯಕತ್ವದ ವಿರುದ್ಧ ಮಾತನಾಡಿ, ಯಾರು ಪಕ್ಷ ಬಿಟ್ಟು ಹೋಗಿದ್ದಾರೋ ಅವರು ಈಗ ವೆಂಟಿಲೇಟರ್‌ನಲ್ಲಿದ್ದಾರೆ. ಪಕ್ಷ ಹಾಗೂ ಪಕ್ಷದ ಮುಖಂಡರ ವಿರುದ್ಧ ಯಾರಾದರೂ ಬಹಿರಂಗವಾಗಿ ಹೇಳಿಕೆ ಕೊಟ್ಟರೆ ಅಂತಹವರ ವಿರುದ್ಧ ಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.

‘ಪಕ್ಷದಲ್ಲಿದ್ದು, ಅಧಿಕಾರ ಅನುಭವಿಸಿ ಬೇರೆ ಪಕ್ಷಕ್ಕೆ ಹೋಗುವಾಗ ಬೇಡವಾದ ಮಾತುಗಳನ್ನು ಆಡುವುದು ಸರಿಯಲ್ಲ. ಒಬ್ಬರು ಹೋದರೆ ಮತ್ತೊಬ್ಬ ನಾಯಕ ಹುಟ್ಟಿಕೊಳ್ಳುತ್ತಾನೆ’ ಎಂದು ಜಿ.ಟಿ. ದೇವೇಗೌಡ ಅವರ ಹೆಸರು ಪ್ರಸ್ತಾಪಿಸದೆ ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.