ಕುರುಗೋಡು: ‘ಸಾರ್ವಜನಿಕರ ಹಳೆಯ ಭೂ ದಾಖಲೆಗಳು ನಾಶವಾಗದಂತೆ ಶಾಶ್ವತವಾಗಿ ಉಳಿಯಲು ಡಿಜಟಲೀಕರಣಗೊಳಿಸುವಲ್ಲಿ ಕುರುಗೋಡು ತಾಲ್ಲೂಕು ಜಿಲ್ಲೆಯಲ್ಲಿ ಮುಂಚೂಣಿಯಲ್ಲಿರುವುದು ಶ್ಲಾಘನಾರ್ಹ’ ಎಂದು ಶಾಸಕ ಜೆ.ಎನ್.ಗಣೇಶ್ ಹೇಳಿದರು.
ಇಲ್ಲಿನ ತಹಶೀಲ್ದಾರ್ ಕಚೇರಿಯಲ್ಲಿ ಸೋಮವಾರ ಸಾರ್ವಜನಿಕರಿಗೆ ಡಿಜಟಲೀಕರಣ ಭೂ ದಾಖಲೆಗಳನ್ನು ವಿತರಿಸಿ ಅವರು ಮಾತನಾಡಿದರು.
‘ಈ ಮೊದಲು ಭೂಮಿಗೆ ಸಂಬಂಧಿಸಿದ ಹಳೆಯ ದಾಖಲೆಗಳನ್ನು ಪಡೆಯಲು ಸಾರ್ವಜನಿಕರು ತಿಂಗಳುಗಟ್ಟಲೆ ಕಚೇರಿಗೆ ಅಲೆಯಬೇಕಿತ್ತು. ಡಿಜಟಲೀಕರಣಗೊಂಡ ನಂತರ ಅರ್ಜಿ ಸಲ್ಲಿಸಿದ ನಂತರ ನಿಗದಿತ ಸಮಯದೊಳಗೆ ಭೂ ದಾಖಲೆಗಳು ದೊರೆಯುತ್ತವೆ. ಸಾರ್ವಜನಿಕರು ಯೋಜನೆಯ ಸದುಪಯೋಗ ಪಡಿಸಿಕೊಳ್ಳಬೇಕು’ ಎಂದರು.
ತಹಶೀಲ್ದಾರ್ ನರಸಪ್ಪ, ಗ್ರೇಡ್-2 ತಹಶೀಲ್ದಾರ್ ಮಲ್ಲೇಶಪ್ಪ, ಪಿ.ಎಸ್.ಐ. ಸುಪ್ರಿತ್, ಪುರಸಭೆ ಅಧ್ಯಕ್ಷ ಟಿ.ಶೇಖಣ್ಣ, ಶಿರಸ್ತೇದಾರ್ ರಾಜಶೇಖರ್, ಕಂದಾಯ ನಿರೀಕ್ಷಕ ಸುರೇಶ್ ಮತ್ತು ಭದ್ರಯ್ಯ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.