ಕಂಪ್ಲಿ: ತಾಲ್ಲೂಕಿನ ಎಮ್ಮಿಗನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶ್ರೀರಾಮಚಂದ್ರಾಪುರ ಕ್ಯಾಂಪ್‍ನಲ್ಲಿ ಕಂದಾಯ ಇಲಾಖೆ ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 133 ಫಲಾನುಭವಿಗಳಿಗೆ ನಿವೇಶನ ಪಟ್ಟಾ ವಿತರಿಸಲಾಯಿತು.
ಪಟ್ಟಾ ವಿತರಿಸಿದ ಶಾಸಕ ಜೆ.ಎನ್. ಗಣೇಶ್, ‘ನಿವೇಶನದಾರರಿಗೆ ಮುಂದಿನ ದಿನಗಳಲ್ಲಿ ವಸತಿ ಯೋಜನೆಯಡಿ ಮನೆ ನಿರ್ಮಿಸಿಕೊಡಲಾಗುವುದು. ರಾಮಚಂದ್ರಾಪುರದಿಂದ ಎಮ್ಮಿಗನೂರು ಗ್ರಾಮಕ್ಕೆ ₹3ಕೋಟಿ ವೆಚ್ಚದಲ್ಲಿ ಸಿ.ಸಿ ರಸ್ತೆ ನಿರ್ಮಿಸಲಾಗುವುದು. ಶ್ರೀರಾಮಚಂದ್ರಾಪುರ-ಎಮ್ಮಿಗನೂರಿಗೆ ಬಸ್ ವ್ಯವಸ್ಥೆ, ಅಂಗನವಾಡಿಗೆ ವಿದ್ಯುತ್ ಸೌಲಭ್ಯ ಕಲ್ಪಿಸಲಾಗುವುದು’ ಎಂದು ವಿವರಿಸಿದರು.
ತಹಶೀಲ್ದಾರ್ ಜೂಗಲ ಮಂಜುನಾಯಕ, ಕಂದಾಯ ನಿರೀಕ್ಷಕ ವೈ.ಎಂ. ಜಗದೀಶ, ಗ್ರಾಮ ಆಡಳಿತ ಅಧಿಕಾರಿ ಎಚ್.ವಿ. ಮಂಜುನಾಥ, ಎಮ್ಮಿಗನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಎಚ್.ಜೆ. ಶಾರದಾ, ಸದಸ್ಯ ಸಂತೋಷಗೌಡ, ಕುರುಗೋಡು ಪುರಸಭೆ ಅಧ್ಯಕ್ಷ ಶೇಖಣ್ಣ, ಉಪಾಧ್ಯಕ್ಷ ಮಲ್ಲಿಕಾರ್ಜುನ, ಸದಸ್ಯ ನಾಗರಾಜ, ರೈತ ಸಂಘದ ಅಧ್ಯಕ್ಷ ವಿ. ವೀರೇಶ್, ಗ್ರಾಮಸ್ಥರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.