ಸಿರುಗುಪ್ಪ: ರೈತರ ಏಳಿಗೆಗಾಗಿ ಸರ್ಕಾರ ನೀಡುವ ಗಂಗಾ ಕಲ್ಯಾಣ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಂಡು ಆರ್ಥಿಕವಾಗಿ ಸದೃಢರಾಗುವಂತೆ ಶಾಸಕ ಬಿ.ಎಂ. ನಾಗರಾಜ ಹೇಳಿದರು.
ನಗರದ ತಾಲ್ಲೂಕು ಮೈದಾನದಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ 2021-22 ಮತ್ತು 2022-23ನೇ ಸಾಲಿನ ಗಂಗಾ ಕಲ್ಯಾಣ ಯೋಜನೆಯ ₹2.5ಲಕ್ಷ ಸಹಾಯ ಧನದಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರಿದ ಸಣ್ಣ ಮತ್ತು ಅತಿಸಣ್ಣ ರೈತರ ಫಲಾನುಭವಿಗಳಿಗೆ ವಿವಿಧ ಸಾಮಗ್ರಿಗಳನ್ನು ಶುಕ್ರವಾರ ವಿತರಿಸಿ ಮಾತನಾಡಿದರು.
58 ರೈತರಿಗೆ ಪಂಪ್‌ಸೆಟ್, ಪೈಪ್‌ಗಳು, ವಿದ್ಯುತ್ ಉಪಕರಣಗಳಿಂದ ನೀರಾವರಿ ಸೌಲಭ್ಯ ಕಲ್ಪಿಸಿಕೊಳ್ಳಲು ಸಾಮಗ್ರಿ ನೆರವಾಗಲಿವೆ ಎಂದರು.
ನಗರಸಭೆ ಅಧ್ಯಕ್ಷೆ ರೇಣುಕಮ್ಮ ವೆಂಕಟೇಶ್, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ನಿಯಮಿತ ಜಿಲ್ಲಾ ವ್ಯವಸ್ಥಾಪಕ ಎಚ್. ಮಲ್ಲಿಕಾರ್ಜುನ, ತಾಲ್ಲೂಕು ಅಧಿಕಾರಿ ರೇವಣ್ಣ ಸಿದ್ದಪ್ಪ, ತಾಲ್ಲೂಕು ಕಾಂಗ್ರೆಸ್ ಅಧ್ಯಕ್ಷ ಕರಿಬಸಪ್ಪ, ನಗರಸಭೆ ಸದಸ್ಯ ಗಣೇಶ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.