ADVERTISEMENT

ಗಾದಿಗನೂರು ಶಾಲೆಗೆ ಡಿ.ಸಿ. ಭೇಟಿ

​ಪ್ರಜಾವಾಣಿ ವಾರ್ತೆ
Published 8 ಸೆಪ್ಟೆಂಬರ್ 2022, 13:02 IST
Last Updated 8 ಸೆಪ್ಟೆಂಬರ್ 2022, 13:02 IST
ಜಿಲ್ಲಾಧಿಕಾರಿ ಅನಿರುದ್ಧ್‌ ಶ್ರವಣ್‌ ಪಿ. ಅವರು ಗುರುವಾರ ಹೊಸಪೇಟೆ ತಾಲ್ಲೂಕಿನ ಗಾದಿಗನೂರು ಶಾಲೆಗೆ ಭೇಟಿ ನೀಡಿ, ಮಕ್ಕಳಿಗೆ ಪಾಠ ಹೇಳಿಕೊಟ್ಟರು
ಜಿಲ್ಲಾಧಿಕಾರಿ ಅನಿರುದ್ಧ್‌ ಶ್ರವಣ್‌ ಪಿ. ಅವರು ಗುರುವಾರ ಹೊಸಪೇಟೆ ತಾಲ್ಲೂಕಿನ ಗಾದಿಗನೂರು ಶಾಲೆಗೆ ಭೇಟಿ ನೀಡಿ, ಮಕ್ಕಳಿಗೆ ಪಾಠ ಹೇಳಿಕೊಟ್ಟರು   

ಹೊಸಪೇಟೆ (ವಿಜಯನಗರ): ತಾಲ್ಲೂಕಿನ ಗಾದಿಗನೂರಿನ ಕರ್ನಾಟಕ ಪಬ್ಲಿಕ್‌ ಶಾಲೆಗೆ ಜಿಲ್ಲಾಧಿಕಾರಿ ಅನಿರುದ್ಧ್‌ ಶ್ರವಣ್‌ ಪಿ. ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮಳೆ ಬಂದಾಗ ಶಾಲೆಯ ಆವರಣದಲ್ಲಿ ನೀರು ನಿಲ್ಲುತ್ತದೆ. ಮಕ್ಕಳ ಕಲಿಕೆಗೆ ಪೂರಕ ವ್ಯವಸ್ಥೆಯಿಲ್ಲ ಎಂದು ಇತ್ತೀಚೆಗೆ ಗ್ರಾಮಸ್ಥರು ದೂರು ಕೊಟ್ಟಿದ್ದರಿಂದ ಜಿಲ್ಲಾಧಿಕಾರಿ ಖುದ್ದು ಭೇಟಿ ನೀಡಿ ಪರಿಶೀಲಿಸಿದರು.

ಶಾಲೆಯ ಆವರಣದಲ್ಲಿ ಮಳೆ ನೀರು ನಿಲ್ಲದಂತೆ ಮಾಡಬೆಕು. ಸ್ವಚ್ಛತೆಗೆ ಒತ್ತು ಕೊಡಬೇಕು. ಕುಡಿಯುವ ನೀರಿಗೆ ವ್ಯವಸ್ಥೆ ಮಾಡಬೇಕು. ಶಾಲೆ ದುರಸ್ತಿಗೊಳಿಸಬೇಕು ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಟಿ. ಮಲ್ಲಿಕಾರ್ಜುನ ಅವರಿಗೆ ಜಿಲ್ಲಾಧಿಕಾರಿ ಸೂಚಿಸಿದರು. 9ನೇ ತರಗತಿಯ ಮಕ್ಕಳಿಗೆ ಗಣಿತ ಲೆಕ್ಕ ಮಾಡಿಸಿದರು. ಇಂಗ್ಲಿಷ್‌ ಓದಿಸಿದರು. ನಿತ್ಯ ದಿನಪತ್ರಿಕೆಗಳನ್ನು ಓದಬೇಕೆಂದು ಮಕ್ಕಳಿಗೆ ಕಿವಿಮಾತು ಹೇಳಿದರು.

ADVERTISEMENT

ಎಸ್‌.ಡಿ.ಎಂ.ಸಿ. ಸದಸ್ಯರಾದ ಬಾಲಾಜಿ, ಕೊರೂರು ಬಸವರಾಜ, ಪ್ರಶಾಂತ್‌, ನಾಯ್ಕರ ಅಂಜಿನಪ್ಪ, ಮುಖ್ಯಶಿಕ್ಷಕ ಶಿವಕುಮಾರ ಬಿ.ಎಂ., ಕಾಲೇಜಿನ ಪ್ರಾಂಶುಪಾಲ ರಮಾ ಕೆ., ಶಿಕ್ಷಕಿಯರಾದ ಸುಮಂಗಲಾ, ಜ್ಯೋತಿ, ಗ್ರಂಥಪಾಲಕ ಕೆ. ಕಲ್ಲಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.