ADVERTISEMENT

ಹಂಪಿ ವೃತ್ತಕ್ಕೆ ಕಲ್ಯಾಣ ಕರ್ನಾಟಕದ ಜಿಲ್ಲೆಗಳು

​ಪ್ರಜಾವಾಣಿ ವಾರ್ತೆ
Published 30 ಆಗಸ್ಟ್ 2020, 14:34 IST
Last Updated 30 ಆಗಸ್ಟ್ 2020, 14:34 IST

ಹೊಸಪೇಟೆ: ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆ (ಎಎಸ್‌ಐ) ಹಂಪಿ ವೃತ್ತದ ವ್ಯಾಪ್ತಿಗೆ ಕಲ್ಯಾಣ ಕರ್ನಾಟಕದ ಐದು ಜಿಲ್ಲೆಗಳನ್ನು ಸೇರಿಸಿ, ಹೊಸದಾಗಿ ಹಂಪಿ ಪೂರ್ವ ವಲಯ ರಚಿಸಲಾಗಿದೆ.

ಯಾದಗಿರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ಬೀದರ್‌, ಹಂಪಿ ವೃತ್ತಕ್ಕೆ ಸೇರಿದ ಜಿಲ್ಲೆಗಳು. ಈ ಹಿಂದೆ ಹಂಪಿ (ಬಳ್ಳಾರಿ) ಹೊರತುಪಡಿಸಿ ಕಲ್ಯಾಣ ಕರ್ನಾಟಕದ ಜಿಲ್ಲೆಗಳು ಧಾರವಾಡ ವೃತ್ತದ ವ್ಯಾಪ್ತಿಗೆ ಸೇರಿದ್ದವು.

‘ಸರ್ಕಾರದ ಈ ನಿರ್ಧಾರದಿಂದ ಹಂಪಿ ವೃತ್ತಕ್ಕೆ ಹೆಚ್ಚಿನ ಅನುದಾನ ಸಿಗಲಿದೆ. ಭದ್ರತೆಗೆ ಹೆಚ್ಚಿನ ಸಿಬ್ಬಂದಿ, ಸ್ಮಾರಕ ರಕ್ಷಣೆಗೆ ಹೆಚ್ಚಿನ ಒತ್ತು ಸಿಗಲಿದೆ. ಪ್ರವಾಸೋದ್ಯಮ ಬೆಳವಣಿಗೆಗೂ ಅನುಕೂಲವಾಗಲಿದೆ’ ಎಂದು ಹಂಪಿ ವೃತ್ತದ ಡೆಪ್ಯುಟಿ ಸೂಪರಿಟೆಂಡೆಂಟ್‌ ಪಿ. ಕಾಳಿಮುತ್ತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.