ಹುಬ್ಬಳ್ಳಿ: ‘ಬಳ್ಳಾರಿ ನಗರದ ಅನಂತಪುರ ರಸ್ತೆಯಲ್ಲಿನ ಬಿಪಿಎಸ್‌ಸಿ ಸಭಾಂಗಣದಲ್ಲಿ ಜೂನ್ 16ರಂದು ಬೆಳಿಗ್ಗೆ 9.30ಕ್ಕೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಕುರಿತ ಸಾಕ್ಷ್ಯಚಿತ್ರ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ‘ ಎಂದು ಬಸವರಾಜ ಧಾರವಾಡ ತಿಳಿಸಿದ್ದಾರೆ.
ಸಿರಿಗೇರಿಯ ಅನ್ನಪೂರ್ಣ ಕ್ರಿಯೇಷನ್ಸ್ ಸಾಕ್ಷಚಿತ್ರವನ್ನು ನಿರ್ಮಿಸಿದ್ದು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧುಬಂಗಾರಪ್ಪ ಬಿಡುಗಡೆ ಮಾಡುವರು. ಬಸವರಾಜ ಹೊರಟ್ಟಿ ಅಧ್ಯಕ್ಷತೆ ವಹಿಸುವರು. ಬಳ್ಳಾರಿ ನಗರ ಶಾಸಕ ಎನ್.ಭರತರಡ್ಡಿ, ಬಿಪಿಎಸ್‌ಸಿ ಸಂಸ್ಥೆಯ ಅಧ್ಯಕ್ಷ ಮಹಿಮಾ ಪಾಟೀಲ ಅತಿಥಿಗಳಾಗಿ ಭಾಗವಹಿಸುವರು ಎಂದು ಅನ್ನಪೂರ್ಣ ಕ್ರಿಯೇಷನ್ಸ್ ನಿರ್ದೇಶಕ ಸಿರಿಗೇರಿಯ ಯರಿಸ್ವಾಮಿ ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.