ADVERTISEMENT

ರಸ್ತೆ ಮೇಲೆ ಹರಿಯುವ ಚರಂಡಿ ನೀರು

​ಪ್ರಜಾವಾಣಿ ವಾರ್ತೆ
Published 12 ಜುಲೈ 2023, 14:38 IST
Last Updated 12 ಜುಲೈ 2023, 14:38 IST
ಕಂಪ್ಲಿ ತಾಲ್ಲೂಕು ಎಮ್ಮಿಗನೂರು ಗ್ರಾಮದ 1ನೇ ವಾರ್ಡ್‌ನಲ್ಲಿ ಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿರುವುದು
ಕಂಪ್ಲಿ ತಾಲ್ಲೂಕು ಎಮ್ಮಿಗನೂರು ಗ್ರಾಮದ 1ನೇ ವಾರ್ಡ್‌ನಲ್ಲಿ ಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿರುವುದು   

ಎಮ್ಮಿಗನೂರು(ಕಂಪ್ಲಿ ತಾಲ್ಲೂಕು): ಎಮ್ಮಿಗನೂರು ಗ್ರಾಮದ 1ನೇ ವಾರ್ಡ್‌ನಲ್ಲಿ ಚರಂಡಿಯ ವ್ಯವಸ್ಥೆ ಇಲ್ಲದ ಕಾರಣ ದಿನ ಬಳಸುವ ತ್ಯಾಜ್ಯ ನೀರು ರಸ್ತೆ ಮೇಲೆ ಹರಿಯುತ್ತಿರುವುದರಿಂದ ಸೊಳ್ಳೆ ಹಾವಳಿ ವಿಪರೀತವಾಗಿದೆ.
ಸೊಳ್ಳೆಗಳಿಂದ ಮಕ್ಕಳ ಆರೋಗ್ಯ ಪರಿಸ್ಥಿತಿಯ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಜೊತೆಗೆ ರಾತ್ರಿ ವೇಳೆ ಶಾಲಾ ವಿದ್ಯಾರ್ಥಿಗಳು ಓದುವುದಕ್ಕೂ ಅಡಚಣೆಯಾಗುತ್ತಿದೆ. ಈ ಬಗ್ಗೆ ಹಾಲಿ ವಾರ್ಡ್ ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಪಿಡಿಒ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ.

–ಈರಣ್ಣ, ಬಸವರಾಜ, ಮಲ್ಲಿಕಾರ್ಜುನ, ಶಿವಕುಮಾರ, ಶೇಖಣ್ಣ, ಜಡೆಪ್ಪ
ವಾರ್ಡ್ ನಿವಾಸಿಗಳು, ಎಮ್ಮಿಗನೂರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT