
ಪ್ರಜಾವಾಣಿ ವಾರ್ತೆ
ಬಳ್ಳಾರಿ: ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರ ಮನೆ ಹಾಗೂ ಕಚೇರಿ ಮೇಲಿನ ಜಾರಿ ನಿರ್ದೇಶನಾಲಯದ (ಇ.ಡಿ) ದಾಳಿ ಎರಡನೇ ದಿನವೂ ಮುಂದುವರಿದಿದೆ.
ಶನಿವಾರ ಮುಂಜಾನೆ 6.30ಕ್ಕೆ ಬಳ್ಳಾರಿಗೆ ಬಂದಿದ್ದ ಇ.ಡಿ ಅಧಿಕಾರಿಗಳ ತಂಡ ಹಲವು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿತ್ತು.
ನಗರದ ಮೋಕಾ ರಸ್ತೆಯಲ್ಲಿರುವ ರಾಘವೇಂದ್ರ ಎಂಟರ್‌ಪ್ರೈಸ್ ಹಾಗೂ ಗ್ರಾನೈಟ್ ಕಂಪನಿಯಲ್ಲೂ ಶೋಧ ನಡೆಯುತ್ತಿದೆ.
ಹಣ ಅಕ್ರಮ ವರ್ಗಾವಣೆ ಪ್ರಕರಣವೊಂದರ ತನಿಖೆಯ ಭಾಗವಾಗಿ ಭರತ್ ರೆಡ್ಡಿ ಮೇಲೆ ಇ.ಡಿ ದಾಳಿ ನಡೆಸಿರುವುದಾಗಿ ಉನ್ನತ ಮೂಲಗಳು ಮಾಹಿತಿ ನೀಡಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.