ADVERTISEMENT

ಸಂಡೂರು| ಕಲಿಕೆಯಲ್ಲಿ ಹಿಂದುಳಿದ ಮಕ್ಕಳು: ಮುಖ್ಯ ಶಿಕ್ಷಕ, ಸಹ ಶಿಕ್ಷಕರಿಗೆ ನೋಟಿಸ್

​ಪ್ರಜಾವಾಣಿ ವಾರ್ತೆ
Published 8 ಜನವರಿ 2026, 1:54 IST
Last Updated 8 ಜನವರಿ 2026, 1:54 IST
<div class="paragraphs"><p>ಕಡತ</p></div>

ಕಡತ

   

(ಸಾಂದರ್ಭಿಕ ಚಿತ್ರ)

ಸಂಡೂರು: ತಾಲ್ಲೂಕಿನ ನಾರಾಯಣಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ, ಸಹ ಶಿಕ್ಷಕರಿಗೆ ಶಾಲಾ ಮಕ್ಕಳು ಕಲಿಕೆಯಲ್ಲಿ ಹಿಂದುಳಿದ ಪರಿಣಾಮ ಶಾಲಾ ಶಿಕ್ಷಣ ಇಲಾಖೆಯ ಬಿಇಒ ಐ.ಆರ್.ಅಕ್ಕಿ ಅವರು ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದಾರೆ.

ADVERTISEMENT

ಶಾಸಕಿ ಅನ್ನಪೂರ್ಣ ತುಕರಾಮ್ ಅವರು ಕಳೆದ ಸೋಮವಾರ ಶಾಲೆಗೆ ಭೇಟಿ ನೀಡಿ ಮಕ್ಕಳ ಕಲಿಕೆಯ ಬಗ್ಗೆ ಪರಿಶೀಲಿಸಿದಾಗ ಮಕ್ಕಳು ಕನ್ನಡ, ಇಂಗ್ಲಿಷ್ ಭಾಷೆಯ ಓದು, ಬರಹದಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಗಣಿತ ವಿಷಯದಲ್ಲಿ ಕಡಿಮೆ ಸಾಧನೆ ಮಾಡಿದ್ದಾರೆ.  ಶಾಲೆಯಲ್ಲಿ 12 ಮಕ್ಕಳು ಗೈರಾಗಿದ್ದರೂ ಹಾಜರಿ ಹಾಕಿರುವುದು ಸರಿಯಲ್ಲ. ಶಾಲಾ ಅಭಿವೃದ್ಧಿ ಸಮಿತಿಯ ಅವಧಿ ಮುಗಿದಿದ್ದರೂ ಹೊಸ ಸಮಿತಿಯನ್ನು ಯಾಕೆ ನೇಮಕ ಮಾಡಿಲ್ಲ? ಶಾಲೆಯಲ್ಲಿ ಇಬ್ಬರು ಕಾಯಂ, ಇಬ್ಬರು ಅತಿಥಿ ಶಿಕ್ಷಕರು ಇದ್ದರು ಸಹ ಮಕ್ಕಳು ಕಲಿಕೆಯಲ್ಲಿ ಹಿಂದುಳಿಯಲು ಕಾರಣವೇನು? ಎಂದು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಶಾಲೆಯ ಮುಖ್ಯ ಶಿಕ್ಷಕ ಪ್ರಸನ್ನ ಕುಮಾರ್ ಸೇರಿದಂತೆ ಇತರೆ ಸಹ ಶಿಕ್ಷಕರಿಗೆ ನೋಟಿಸ್ ಜಾರಿ ಮಾಡಲಾಗಿದ್ದು, ಮೂರು ದಿನದ ಒಳಗಾಗಿ ಲಿಖಿತವಾಗಿ ಸಮುಜಾಯಿಸಿ ಉತ್ತರ ನೀಡಬೇಕು. ತಪ್ಪಿದ್ದಲ್ಲಿ ಇಲಾಖೆಯ ಆದೇಶದ ಅನುಸಾರ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸೂಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.