ಕೂಡ್ಲಿಗಿ: ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶದಿಂದ ತರಕಾರಿ ಮಾರುತ್ತಿದ್ದ ಯುವಕ ಸಾಗರ್ (25) ಮೃತಪಟ್ಟ ಘಟನೆ ಪಟ್ಟಣದ ಹಳೇ ಆಸ್ಪತ್ರೆ ಬಳಿ ಸೋಮವಾರ ರಾತ್ರಿ ನಡೆದಿದೆ.
ಪಟ್ಟಣದ ರಾಜೀವ್ ಗಾಂಧಿ ನಗರದ ನಿವಾಸಿಯಾದ ಜಿ.ನಾಗೇಂದ್ರ ಯಾದವ್ ಅವರ ಪುತ್ರ ಸಾಗರ ಹಳೇ ಆಸ್ಪತ್ರೆ ಬಳಿ ತರಕಾರಿ ವ್ಯಾಪಾರ ಮಾಡುತ್ತಿದ್ದ. ಈ ಸಂದರ್ಭದಲ್ಲಿ ಮಳೆ ಆರಂಭವಾಗಿದ್ದು, ತರಕಾರಿ ಅಂಗಡಿ ಬಳಿ ಇದ್ದ ವಿದ್ಯುತ್ ಟ್ರಾನ್ಸ್‌ಫಾರ್ಮರ್ ಇನ್ಸುಲೇಟರ್ ಸಿಡಿದು 11 ಕೆವಿ ವಿದ್ಯುತ್ ತಂತಿ ತುಂಡಾಗಿ ತರಕಾರಿ ಅಂಗಡಿ ಮೇಲೆ ಬಿದ್ದಿದೆ.
ಇದರಿಂದ ಅಂಗಡಿಯಲ್ಲಿದ್ದ ಸಾಗರ್‌ಗೆ ವಿದ್ಯುತ್ ಸ್ಪರ್ಶವಾಗಿ ಆಸ್ವಸ್ಥಗೊಂಡಿದ್ದಾರೆ. ಇದನ್ನು ನೋಡಿದ ಸ್ಥಳೀಯರು ತಕ್ಷಣ ಅತನನ್ನು ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದ್ದಾರೆ. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಸಾಗರ್ ಮೃತಪಟ್ಟಿದ್ದಾನರೆ. ಕೂಡ್ಲಿಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.