ADVERTISEMENT

ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ಸಾವು

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2025, 4:53 IST
Last Updated 4 ಡಿಸೆಂಬರ್ 2025, 4:53 IST
<div class="paragraphs"><p>ಅಪಘಾತ,&nbsp;–ಪ್ರಾತಿನಿಧಿಕ ಚಿತ್ರ</p></div>

ಅಪಘಾತ, –ಪ್ರಾತಿನಿಧಿಕ ಚಿತ್ರ

   

–ಪ್ರಾತಿನಿಧಿಕ ಚಿತ್ರ

ಮರಿಯಮ್ಮನಹಳ್ಳಿ: ಬೈಕ್ ಅಪಘಾತದಲ್ಲಿ ತೀವ್ರಗಾಯಗೊಂಡ ಎಂಜಿನಿಯರಿಂಗ್ ವಿದ್ಯಾರ್ಥಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಹೊಸಪೇಟೆ ಸರ್ಕಾರಿ ಆಸ್ಪತ್ರೆಯಿಂದ ಬಳ್ಳಾರಿ ವಿಮ್ಸ್‍ಗೆ ಸಾಗಿಸುವ ಮಾರ್ಗ ಮದ್ಯೆ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.

ADVERTISEMENT

ಸಂಡೂರು ತಾಲ್ಲೂಕಿನ ಕುಡಿತಿನಿ ಗ್ರಾಮದ ನಿವಾಸಿ ಹಾಗೂ ಹೊಸಪೇಟೆಯ ಪಿಡಿಐಟಿ ಕಾಲೇಜಿನ ಎಂಜಿನಿಯರಿಂಗ್ ವಿದ್ಯಾರ್ಥಿ ಪ್ರಸನ್ನ(22) ಮೃತಪಟ್ಟವರು.

ವಿದ್ಯಾರ್ಥಿ ಪ್ರಸನ್ನ ಕೂಡ್ಲಿಗಿಯ ವಿಂಡ್ ಫ್ಯಾನ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಾ ಹೊಸಪೇಟೆಯ ಪಿಡಿಐಟಿ ಕಾಲೇಜಿನ ಎಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದನು. ಮಂಗಳವಾರ ಬೆಳಿಗ್ಗೆ ಕೂಡ್ಲಿಗಿಯಿಂದ ಹೊಸಪೇಟೆಗೆ ಯಮಹ ಬೈಕ್‍ನಲ್ಲಿ ಬರುತ್ತಿದ್ದಾಗ, ಪಟ್ಟಣ ಸಮೀಪದ ರಾಷ್ಟ್ರೀಯ ಹೆದ್ದಾರಿ-50ರ ಗುಂಡಾ ಸಸ್ಯೋದ್ಯಾನದ ಬಳಿಯ ತುಂಗಭದ್ರ ಜಲಾಶಯದ ಹಿನ್ನೀರಿನ ಸುರಂಗ ಮಾರ್ಗದ(ಟನಲ್) ಬಳಿ ಅಜಾಗರೂಕತೆ ಹಾಗೂ ಅತಿವೇಗದಿಂದ ಬೈಕ್ ಅನ್ನು ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದು ಸುಮಾರು 10ಅಡಿಗೂ ಹೆಚ್ಚು ಆಳವಾದ ಗುಂಡಿಗೆ ಬಿದ್ದಿದ್ದಾನೆ.

ಅಪಘಾತದಲ್ಲಿ ತೀವ್ರಗಾಯಗೊಂಡ ಪ್ರಸನ್ನ ಅವರನ್ನು ಚಿಕಿತ್ಸೆಗಾಗಿ ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿ ವಿಮ್ಸ್‍ಗೆ ಸಾಗಿಸುವ ಮಾರ್ಗ ಮದ್ಯೆ ಸಾವನ್ನಪ್ಪಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.